ಕರ್ನಾಟಕ

karnataka

ETV Bharat / state

ನಮಗೆ ಸಂಪೂರ್ಣ ವಿಶ್ವಾಸ ಇದೆ, ಕರ್ನಾಟಕದ ಯಾವುದೇ ಭಾಗ ಮಹಾರಾಷ್ಟ್ರಕ್ಕೆ ಹೋಗಲ್ಲ: ಸಿಎಂ ಬೊಮ್ಮಾಯಿ

ಶರದ್ ಪವಾರ್ ಬಹಳ ವರ್ಷಗಳಿಂದ ಕರ್ನಾಟಕ ಮಹರಾಷ್ಟ್ರ ಗಡಿ ವಿಚಾರದಲ್ಲಿ ರಾಜಕೀಯ ಮಾಡಿದ್ದಾರೆ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಅಂತ ಕನಸು ಕಾಣುತ್ತಿದ್ದಾರೆ, ಮಹಾರಾಷ್ಟ್ರಕ್ಕೆ ಬೆಳಗಾವಿ ಸೇರಿಸುವ ಕನಸು ನನಸಾಗೋದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Kn_dvg
ಸಿಎಂ ಬಸವರಾಜ್​ ಬೊಮ್ಮಾಯಿ

By

Published : Nov 26, 2022, 2:25 PM IST

ದಾವಣಗೆರೆ: ನಮಗೆ ಸಂಪೂರ್ಣ ವಿಶ್ವಾಸ ಇದೆ, ಕರ್ನಾಟಕದ ಯಾವುದೇ ಭಾಗ ಮಹಾರಾಷ್ಟ್ರಕ್ಕೆ ಹೋಗಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆ ಉತ್ತರ ಮತ ಕ್ಷೇತ್ರದ ಶಾಸಕ ಎಸ್ಎ ರವೀಂದ್ರನಾಥ್ ಅವರ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ತೆರಳುವ ಮುನ್ನ ನಗರದ ಜಿಎಂಐಟಿ ಹೆಲಿಪ್ಯಾಡ್​ನಲ್ಲಿ ಮಹಾರಾಷ್ಟ್ರ ಗಡಿ ಕ್ಯಾತೆ ಕುರಿತು ಪ್ರತಿಕ್ರಿಯಿಸಿದ ಅವರು, ಸ್ಟೇಟ್ ರಿ-ಆರ್ಗನೈಸೇಷನ್ ವಿಚಾರದಲ್ಲಿ ಆರ್ಟಿಕಲ್ಸ್ 3 ಅಡಿಯಲ್ಲಿ ಮಹಾರಾಷ್ಟ್ರ ನ್ಯಾಯಾಲಯದಲ್ಲಿ ದಾವೆ ಹೂಡಿದೆ.

ಅವರು ಹೂಡಿರುವ ದಾವೆ ನ್ಯಾಯ ಸಮ್ಮತವಲ್ಲ, ಅನ್ನೋದನ್ನ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುತ್ತೇವೆ. ಹಿರಿಯ ವಕೀಲ ಉದಯ್​ ಹೊಳ್ಳ ಮತ್ತು ತಜ್ಞರ ಜೊತೆ ಚರ್ಚೆ ಮಾಡಿದ್ದೇವೆ. ನಮಗೆ ಸಂಪೂರ್ಣ ವಿಶ್ವಾಸ ಇದೆ, ಕರ್ನಾಟಕದ ಯಾವುದೇ ಭಾಗ ಮಹಾರಾಷ್ಟ್ರಕ್ಕೆ ಹೋಗಲ್ಲ. ಕರ್ನಾಟಕದ ಯಾವುದೇ ಪ್ರದೇಶ ಬದಲಾಗಲ್ಲ. ಅವರದ್ದು ಬೇರೆ ಬೇರೆ ಡಿಮ್ಯಾಂಡ್ ಇದೆ. ಮುಂದಿ‌ನ ವಾರ ಸರ್ವ ಪಕ್ಷಗಳ ಹಾಗೂ ಕಾನೂನು ತಜ್ಞರ ಸಭೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಶರದ್ ಪವಾರ್ ಗಡಿ ವಿಚಾರದಲ್ಲಿ ರಾಜಕೀಯ ಮಾಡಿದವರು:ಎನ್​ಸಿಪಿ ಮುಖ್ಯಸ್ಥಶರದ್ ಪವಾರ್ ಮೇಲೆ ನಮಗೆ ಅಪಾರವಾದ ಗೌರವ ಇದೆ. ಅವರು ಹಿರಿಯರು, ಶರದ್ ಪವಾರ್ ಬಹಳ ವರ್ಷಗಳಿಂದ ಕರ್ನಾಟಕ ಮಹರಾಷ್ಟ್ರ ಗಡಿ ವಿಚಾರದಲ್ಲಿ ರಾಜಕೀಯ ಮಾಡಿದ್ದಾರೆ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಅಂತ ಕನಸು ಕಾಣುತ್ತಿದ್ದಾರೆ. ಮಹಾರಾಷ್ಟ್ರಕ್ಕೆ ಬೆಳಗಾವಿ ಸೇರಿಸುವ ಕನಸು ನನಸಾಗೋದಿಲ್ಲ ಎನ್ನುವ ಮೂಲಕ ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್​ ಸಂದೇಶ ರವಾನಿಸಿದರು.

ಇದನ್ನೂ ಓದಿ:ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ: ಕಾಗವಾಡದಲ್ಲಿ ಬೆಳಗಾವಿ ಜಿಲ್ಲಾಡಳಿತ ಕಟ್ಟೆಚರ

ABOUT THE AUTHOR

...view details