ಚಿಕ್ಕೋಡಿ: ಶಾಸಕ ದುರ್ಯೋಧನ ಐಹೊಳೆ ಅವರು ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕಗೊಳ್ಳುತ್ತಿದ್ದಂತೆ, ಅವರ ಅಭಿಮಾನಿಗಳು ರಾಯಬಾಗ ಪಟ್ಟಣದ ಝೇಂಡಾಕಟ್ಟೆ ಹತ್ತಿರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ದುರ್ಯೋಧನ ಐಹೊಳೆಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ: ಪಟಾಕಿ ಸಿಡಿಸಿ ಸಿಹಿ ಹಂಚಿದ ಕಾರ್ಯಕರ್ತರು..! - cm bsy appointed MLA Aihole as president of board of corporation
ರಾಯಬಾಗ ಶಾಸಕ ದುರ್ಯೋಧನ ಐಹೊಳೆ ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿದ್ದು, ರಾಯಬಾಗ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷಗಿರಿಯನ್ನು ನೀಡಿದ್ದು, ಸಂಪುಟ ದರ್ಜೆಯ ಸ್ಥಾನಮಾನವನ್ನು ಐಹೊಳೆಯವರು ಪಡೆದಿದ್ದಕ್ಕೆ ರಾಯಬಾಗ ಜನತೆ ಖುಷಿಪಟ್ಟಿದ್ದಾರೆ.
ಈ ಬಗ್ಗೆ ಚಿಕ್ಕೋಡಿಯ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ ಸದಾಶಿವ ಹುಂಜ್ಯಾಗೋಳ ಮಾತನಾಡಿ, ಸಿಎಂ ಬಿಎಸ್ವೈ ನೇತೃತ್ವದ ರಾಜ್ಯ ಬಿಜೆಪಿ ಸರಕಾರಕ್ಕೆ ಒಂದು ವರ್ಷ ತುಂಬಿದ ಶುಭ ಗಳಿಗೆಯಲ್ಲಿ, ಶಾಸಕ ಐಹೊಳೆಯವರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ, ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಇದು ರಾಯಬಾಗ ಕ್ಷೇತ್ರದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.