ಅರುಣ್ ಸಿಂಗ್ ಜೊತೆ ಚರ್ಚಿಸಿದ ಬಳಿಕವೇ ಸಂಪುಟ ವಿಸ್ತರಣೆ : ಸಿಎಂ ಬಿಎಸ್ವೈ - CM BSY reaction about cabinet expansion
16:25 December 04
ಬೆಳಗಾವಿಗೆ ಆಗಮಿಸಲಿರುವ ಅರುಣ್ ಸಿಂಗ್
ಬೆಳಗಾವಿ :ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚಿಸಿಯೇ ಸಂಪುಟ ವಿಸ್ತರಣೆಯ ನಿರ್ಧಾರ ತೆಗೆದುಕೊಳ್ಳುವೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ದೆಹಲಿಯಿಂದ ಹೈಕಮಾಂಡ್ ಸಂದೇಶ ಹೊತ್ತು ಅರುಣ್ ಸಿಂಗ್ ಬೆಳಗಾವಿಗೆ ಬರುತ್ತಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಾಯಕರು ಅವರ ಮುಂದೆ ಎಲ್ಲವನ್ನೂ ಹೇಳಿ ಕಳಿಸಿದ್ದಾರೆ. ಅವರ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಗ್ರಾಮ ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪಕ್ಷ ಸಂಘಟನೆ ದೃಷ್ಟಿಯಿಂದ ಗ್ರಾಪಂ ಮಹತ್ವದ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ, ಗ್ರಾಪಂ ಚುನಾವಣೆ ಬಗ್ಗೆ ಕಾರ್ಯಕಾರಣಿಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ವಿಚಾರಗಳ ಚರ್ಚೆ ನಡೆಸಲಾಗುವುದು ಎಂದರು.