ಬೆಳಗಾವಿ:ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯ ಸುವರ್ಣ ಸೌಧದ ಬಳಿ ಅವರು ಮಾತನಾಡಿದರು. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಮೀಸಲಿಡುವುದಾಗಿ ಸಿಎಂ ನೀಡಿದ್ದ ಹೇಳಿಕೆಯನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದರಲ್ಲಿ ತಪ್ಪೇನಿದೆ ಎಂದರು. ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದರು.
ಮೀಸಲು ನೀಡಿದ್ದರಲ್ಲಿ ಏನು ತಪ್ಪಿದೆ? ಮುಸ್ಲಿಮರೂ ಸೇರಿ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೇನೆ. ಅದನ್ನು ಬಿಟ್ಟು ಬರೆದರೆ ಏನು ಮಾಡುವುದು?. ಅದು ತುಷ್ಟೀಕರಣನಾ?. ಅದಕ್ಕೆ ಉಪ್ಪು ಖಾರ ಹಾಕಿ ಹೇಳುತ್ತಿದ್ದಾರೆ ಅಷ್ಟೇ. ಮುಸ್ಲಿಮರೂ ಸೇರಿ ಎಲ್ಲರಿಗೂ ರಕ್ಷಣೆ ಕೊಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು .
ಸಿದ್ದರಾಮಯ್ಯ ತುಷ್ಠಿಕರಣ ಮಾಡ್ತಿದ್ದಾರೆ-ಅಶ್ವಥ್ ನಾರಾಯಣ್:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲರನ್ನು ಒಂದು ಎನ್ನುವ ಭಾವನೆ ಬರುವಂತಹ ಆಡಳಿತ ನೀಡಬೇಕು ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಆಗ್ರಹ ಮಾಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲರನ್ನೂ ಸಮಾನವಾಗಿ ನೋಡುವ ಕೆಲಸ ಮಾಡಬೇಕು ಎಂದರು.