ಬೆಳಗಾವಿ: ರಾಜ್ಯದಲ್ಲಿ ಕೊರೊನಾ ತುರ್ತುಪರಿಸ್ಥಿತಿ ಇದ್ದರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳದೆ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊರಬಂದ ಪ್ರಸಂಗ ನಡೆಯಿತು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಪಾಸಣೆ ತಪ್ಪಿಸಿಕೊಂಡು ಹೊರಬಂದ ಸಿಎಂ! - ಸಾಂಬ್ರಾ ವಿಮಾನ ನಿಲ್ದಾಣ
ಕರ್ನಾಟಕದಲ್ಲಿ ಒಂದು ವಾರಗಳ ಕಾಲ ಕೊರೊನಾ ಮೆಡಿಕಲ್ ಎಮರ್ಜೆನ್ಸಿ ಘೋಷಿಸಲಾಗಿದೆ. ಹೀಗಾಗಿ ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಪ್ರಯಾಣಿಕರನ್ನು ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಆದ್ರೆ ಇಂದು ಬೆಳಗಾವಿಗೆ ಭೇಟಿ ನೀಡಿರುವ ಸಿಎಂ ತಪಾಸಣೆ ಮಾಡಿಸಿಕೊಳ್ಳದೇ ವಿಮಾನ ನಿಲ್ದಾಣದಿಂದ ಹೊರಬಂದ ಘಟನೆ ನಡೆದಿದೆ.
ಕೊರೊನಾ ಎಮರ್ಜೆನ್ಸಿ ನಡುವೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡದೆ ಹೊರಬಂದ ಸಿಎಂ
ಕೊರೊನಾ ಭೀತಿಯಿಂದಾಗಿ ಆರೋಗ್ಯ ಇಲಾಖೆ ಸಾಂಬ್ರಾ ವಿಮಾ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಯಂತ್ರ ಅಳವಡಿಸಿದೆ. ಸೋಂಕಿತರನ್ನು ಪತ್ತೆ ಹಚ್ಚುವ ಇನ್ಫ್ರಾರೆಡ್ ಥರ್ಮಾಮೀಟರ್ ಯಂತ್ರ ಇಲ್ಲಿದೆ. ಸಿಎಂ ಅವರನ್ನು ತಪಾಸಣೆಗೊಳಪಡಿಸಲು ಆರೋಗ್ಯ ಇಲಾಖೆ ಸಿಬ್ಬಂದಿ ಅಣಿಯಾಗಿದ್ದರು. ಆದ್ರೆ ಸಿಎಂ ವಿಶ್ರಾಂತಿ ಕೊಠಡಿಯಿಂದ ನೇರವಾಗಿ ಹೊರಬಂದು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಬಳಿಕ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.
ನಂತರ ನಗರದಲ್ಲಿ ನಡೆಯುತ್ತಿರುವ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರ ಪುತ್ರಿ ಮದುವೆ ಸಮಾರಂಭಕ್ಕೆ ತೆರಳಿದರು.
Last Updated : Mar 15, 2020, 12:55 PM IST