ಬೆಳಗಾವಿ: ಅತಿವೃಷ್ಟಿಗೆ ತುತ್ತಾದ ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಕೈಗೊಂಡರು.
ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿ: ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಬಿಎಸ್ವೈ - ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ, ಮಾರ್ಕಂಡೇಯ, ವೇದಗಂಗಾ ಹಾಗೂ ದೂದಗಂಗಾ ನದಿ ತೀರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ನಡೆಸಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಮೂಲಕ ಸಿಎಂ ಅವರ ವೈಮಾನಿಕ ಸಮೀಕ್ಷೆ ಆರಂಭವಾಗಿದೆ. ಬೆಳಗಾವಿ ಹಾಗೂ ಮಹಾರಾಷ್ಟ್ರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಕೆಲ ಗ್ರಾಮಗಳು ಮುಳುಗಡೆ ಆಗಿ, ಅಪಾರ ಪ್ರಮಾಣದ ಬೆಳೆ ಹಾನಿ ಆಗಿದೆ. ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ, ಮಾರ್ಕಂಡೇಯ, ವೇದಗಂಗಾ ಹಾಗೂ ದೂದಗಂಗಾ ನದಿ ತೀರದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ ನಡೆಸಿದರು.
ಸಿಎಂಗೆ ಸಚಿವರಾದ ಆರ್. ಅಶೋಕ, ಬಸವರಾಜ ಬೊಮ್ಮಾಯಿ, ರಮೇಶ್ ಜಾರಕಿಹೊಳಿ ಸಾಥ್ ನೀಡಿದರು. ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ ಬಳಿಕ ಸಿಎಂ ಆಲಮಟ್ಟಿಯಲ್ಲಿ ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜನಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ.