ಕರ್ನಾಟಕ

karnataka

ETV Bharat / state

ಕೋವಿಡ್ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ - ಹಿರಿಯ ಅಧಿಕಾರಿಗಳ ಸಭೆ

ಕೋವಿಡ್ ಕುರಿತಂತೆ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಯಡಿಯೂರಪ್ಪ, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.

Cm meeting
Cm meeting

By

Published : Oct 7, 2020, 12:38 PM IST

ಬೆಳಗಾವಿ: ಕೋವಿಡ್-19 ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್ ಕುರಿತಂತೆ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಮೂಲಕ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ ಪಾಲನೆಗೆ ಮೊದಲ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.

ಕೋವಿಡ್-19 ತಪಾಸಣೆಗೆ ಸಂಬಂಧಿಸಿದಂತೆ ಇರುವ ಅಡೆತಡೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ನೀಡಲಿರುವ ಹೊಸ ಮಾರ್ಗಸೂಚಿ ಆಧರಿಸಿ, ಇನ್ನಷ್ಟು ಚಟುವಟಿಕೆಗಳು ಆರಂಭಗೊಳ್ಳಲಿರುವುದರಿಂದ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಸದ್ಯಕ್ಕೆ ಸೋಂಕು ಹಾಗೂ ಮರಣ ಪ್ರಮಾಣದಲ್ಲಿ ಕ್ರಮೇಣ ಇಳಿಕೆ ಕಂಡುಬರುತ್ತಿದೆ. ಮಾರ್ಗಸೂಚಿಗಳ ಅನುಷ್ಠಾನಕ್ಕೆ ಇನ್ನಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ABOUT THE AUTHOR

...view details