ಕರ್ನಾಟಕ

karnataka

ETV Bharat / state

ಎಸ್ಎಸ್ಎಲ್​ಸಿ ಪರೀಕ್ಷೆ ಬಗ್ಗೆ ಸಿಎಂ ಯಡಿಯೂರಪ್ಪ ಮಹತ್ವದ ಹೇಳಿಕೆ - ಸಿಎಂ ಯಡಿಯೂರಪ್ಪ ಮಹತ್ವದ ಹೇಳಿಕೆ,

ಎಸ್ಎಸ್ಎಲ್​ಸಿ ಪರೀಕ್ಷೆ ಬಗ್ಗೆ ಸಿಎಂ ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.

CM Yediyurappa reaction, CM Yediyurappa reaction on SSLC exam, SSLC exam, SSLC exam news, SSLC exam update, ಸಿಎಂ ಯಡಿಯೂರಪ್ಪ ಮಹತ್ವದ ಹೇಳಿಕೆ, ಎಸ್ಎಸ್ಎಲ್​ಸಿ ಪರೀಕ್ಷೆ ಬಗ್ಗೆ ಸಿಎಂ ಯಡಿಯೂರಪ್ಪ ಮಹತ್ವದ ಹೇಳಿಕೆ, ಎಸ್ಎಸ್ಎಲ್​ಸಿ ಪರೀಕ್ಷೆ, ಎಸ್ಎಸ್ಎಲ್​ಸಿ ಪರೀಕ್ಷೆ ಸುದ್ದಿ, ಎಸ್ಎಸ್ಎಲ್​ಸಿ ಪರೀಕ್ಷೆ ಅಪ್​ಡೇಟ್​,
ಎಸ್ಎಸ್ಎಲ್​ಸಿ ಪರೀಕ್ಷೆ ಬಗ್ಗೆ ಸಿಎಂ ಯಡಿಯೂರಪ್ಪ ಮಹತ್ವದ ಹೇಳಿಕೆ

By

Published : Jun 4, 2021, 1:26 PM IST

ಬೆಳಗಾವಿ:ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿನ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.

ಪರೀಕ್ಷೆ ನಡೆಸುವ ವಿಚಾರವಾಗಿ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಇನ್ನೂ ಒಂದೂವರೆ ಎರಡು‌ ತಿಂಗಳ ನಂತರ ಕೊರೊನಾ ನಿಯಂತ್ರಣಕ್ಕೆ ಬಂದರೆ ಪರೀಕ್ಷೆ ನಡೆಸುವ ತೀರ್ಮಾನ ಮಾಡುತ್ತೇವೆ. ಮಕ್ಕಳಿಗೆ ಏನೂ ತೊಂದರೆ ಆಗುವುದಿಲ್ಲ. ಪೋಷಕರು ಕೂಡ ಗೊಂದಲಕ್ಕೆ ಒಳಗಾಗುವುದು ಬೇಡ ಎಂದರು.

ಸಿಎಂ ಯಡಿಯೂರಪ್ಪ

ಈಗಾಗಲೇ ನಾನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆಗೆ ಮಾತನಾಡಿದ್ದೇನೆ. ಇನ್ನೂ ಕೆಲವು ದಿನಗಳ ನಂತರ ಪರೀಕ್ಷೆ ನಡೆಸುವುದಾಗಿ ಹೇಳಿದ್ದಾರೆ. ಪರಿಸ್ಥಿತಿ ಸುಧಾರಣೆ ಆದರೆ ಎರಡು ದಿನಗಳಲ್ಲಿ ಎಲ್ಲಾ ಪರೀಕ್ಷೆ ಮುಗಿಸಬಹುದು ಎಂದಿದ್ದಾರೆ ಎಂದು ಸಿಎಂ ಹೇಳಿದರು.

ಈ ಮೊದಲೇ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ,‌ ಕೊರೊನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಜುಲೈನಲ್ಲಿ ಪರೀಕ್ಷೆ ನಡೆಸುತ್ತೇವೆ. ಇಲ್ಲವಾದರೆ ಪರೀಕ್ಷೆ ನಡೆಸುವುದಿಲ್ಲ ಎಂದಿದ್ದರು.

ಮೈಸೂರಿನ‌ ಇಬ್ಬರು ಐಎಎಸ್ ಅಧಿಕಾರಿಗಳ ಮಧ್ಯೆ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ವಹಿಸುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಇಂದು ಮೈಸೂರಿಗೆ ಹೋಗಿದ್ದಾರೆ. ಆ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಪ್ರತಿಕ್ರಿಯೆ ‌ನೀಡಿದರು.

ಸಿಎಂ ಜೊತೆಗೆ ಡಿಸಿಎಂಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಉಮೇಶ್ ಕತ್ತಿ, ಬಸವರಾಜ ಬೊಮ್ಮಾಯಿ, ಶ್ರೀಮಂತ ಪಾಟೀಲ ಇದ್ದರು.

ABOUT THE AUTHOR

...view details