ಅಥಣಿ(ಬೆಳಗಾವಿ):2017-18ನೇ ಸಾಲಿನಲ್ಲಿ ಪದವಿ ವ್ಯಾಸಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸರ್ಕಾರ ಲ್ಯಾಪ್ಟಾಪ್ ವಿತರಣೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಥಣಿಯಲ್ಲಿ ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಲ್ಯಾಪ್ಟಾಪ್ ವಿತರಣೆಗೆ ಆಗ್ರಹಿಸಿ ಕಾಲೇಜಿಗೆ ಬೀಗ ಜಡಿದು ವಿದ್ಯಾರ್ಥಿಗಳಿಂದ ಪ್ರತಿಭಟನೆ - laptop distribution in Belagavi
2017-18ನೇ ಸಾಲಿನಲ್ಲಿ ಪದವಿ ವ್ಯಾಸಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸರ್ಕಾರ ಲ್ಯಾಪ್ಟಾಪ್ ವಿತರಣೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಥಣಿಯಲ್ಲಿ ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
2019-20ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪ್ರಸಕ್ತ ಸಾಲಿನ ಲ್ಯಾಪ್ಟಾಪ್ ವಿತರಿಸಲಾಗುತ್ತಿದೆ. ಆದರೆ, ಈ ಹಿಂದೆಯೇ ನೋಂದಣಿ ಮಾಡಿಕೊಂಡಿರುವ 2017-18 ಹಾಗೂ 18-19ನೇ ಸಾಲಿನ ವಿದ್ಯಾರ್ಥಿಗಳು ಲ್ಯಾಪ್ಟಾಪ್ ಸೌಲಭ್ಯದಿಂದ ವಂಚಿತರಾಗಿದ್ದಾರೆ.
ಇನ್ನು ಸರ್ಕಾರ 2017-18ನೇ ಸಾಲಿನ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲು ಸುತ್ತೋಲೆ ಹೊರಡಿಸಿದ್ದು, ಕೆಲ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಲ್ಯಾಪ್ಟಾಪ್ ವಿತರಣೆ ಮಾಡಲಾಗಿದೆ. ಆದರೆ, ಇನ್ನುಳಿದ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿಲ್ಲ. ಆದ್ದರಿಂದ ಕೂಡಲೇ ಈ ಕುರಿತು ಸರ್ಕಾರ ಕ್ರಮ ಕೈಗೊಂಡು ನಮಗೆ ಲ್ಯಾಪ್ಟಾಪ್ ನೀಡಬೇಕು ಎಂದು ಒತ್ತಾಯಿಸಿ ಮಹಾವಿದ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಲಾಯಿತು.