ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಮನೆ ಗೋಡೆ ಕುಸಿದು ಬಾಲಕ ಸಾವು ಪ್ರಕರಣ : ಕೆಲವೇ ಗಂಟೆಗಳಲ್ಲಿ ಪರಿಹಾರ ನೀಡಿದ ಡಿಸಿ - belagavi rain effect

ಮನೆ ಗೋಡೆ ಕುಸಿದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಜಿಲ್ಲಾಡಳಿತ ಪರಿಹಾರ ತಲುಪಿಸಿದೆ.

compensation to boy family who died after house wall collapses
ಗೋಡೆ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಪರಿಹಾರ

By

Published : Jul 15, 2022, 8:03 PM IST

ಬೆಳಗಾವಿ: ಖಾನಾಪುರ ತಾಲೂಕಿನ ಬೀಡಿ ಹೋಬಳಿಯ ಚುಂಚವಾಡ ಗ್ರಾಮದಲ್ಲಿ ಮಳೆಯಿಂದ ಗೋಡೆ ಕುಸಿದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ 5 ಲಕ್ಷ ರೂಪಾಯಿ ಪರಿಹಾರ ತಲುಪಿಸಿದ್ದಾರೆ.

ಅನಂತರಾಜ ಧರಣೇಂದ್ರ ಪಾಶೆಟ್ಟಿ(16) ಮನೆಯ ಗೋಡೆ ಕುಸಿದ ಪರಿಣಾಮ ಸಾವನ್ನಪ್ಪಿದ್ದ. ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೆಲವೇ ಗಂಟೆಗಳಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಆರ್.ಟಿ.ಜಿ‌.ಎಸ್ ಮೂಲಕ ಜಮಾ‌ ಮಾಡಿದ್ದಾರೆ. ಪ್ರಕೃತಿ ವಿಕೋಪದಿಂದ ಈ ಘಟನೆ ಸಂಭವಿಸಿರುವ ಹಿನ್ನೆಲೆಯಲ್ಲಿ ನಿಯಮಾವಳಿ ಪ್ರಕಾರ ಮೃತ ಬಾಲಕನ ತಂದೆ ಧರಣೇಂದ್ರ ಪಾಶೆಟ್ಟಿ ಅವರ ಬ್ಯಾಂಕ್ ಖಾತೆಗೆ ಪರಿಹಾರ ಧನವನ್ನು ಖಾನಾಪುರ ತಹಶೀಲ್ದಾರರ ಪಿ.ಡಿ. ಖಾತೆಯಿಂದ ಜಮಾ ಮಾಡಲಾಗಿದೆ.

ಇದನ್ನೂ ಓದಿ:ಬೆಳಗಾವಿ: ಮಳೆಗೆ 2 ದಿನ ಶಾಲೆಗೆ ರಜೆ, ಮನೆ ಗೋಡೆ ಕುಸಿದು ಬಾಲಕ ಸಾವು

ದುರಂತದ ಕುರಿತು ವರದಿಯನ್ನು ಪಡೆದುಕೊಂಡ ಕೆಲವೇ ಗಂಟೆಗಳಲ್ಲಿ ಮೃತರ ವಾರಸುದಾರರಿಗೆ ಪರಿಹಾರ ಧನವನ್ನು ನೀಡುವ ಮೂಲಕ ಜಿಲ್ಲಾಡಳಿತ ಅತ್ಯಂತ ತ್ವರಿತವಾಗಿ ಸ್ಪಂದಿಸಿದೆ‌.

ABOUT THE AUTHOR

...view details