ಕರ್ನಾಟಕ

karnataka

ETV Bharat / state

ನ್ಯಾಯಾಂಗ ನಿಂದನೆ ಆರೋಪ.. ಶಾಸಕ ಸಿ ಟಿ ರವಿ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ದೂರು - ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ

ಉಚ್ಚ ನ್ಯಾಯಾಲಯ, ಕೊರೊನಾ ಸಂದಿಗ್ಧ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಕೆಲವು ವಿಷಯಗಳಲ್ಲಿ ಸೂಚನೆ ನೀಡಿದ್ದರು. ಈ ಸೂಚನೆ ಸೂಕ್ತವೆಂದು ಸರ್ವೋಚ್ಚ ನ್ಯಾಯಾಲಯ ಎತ್ತಿ ಹಿಡಿದಿತ್ತು. ಆದರೆ, ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಉದ್ದೇಶ ಪೂರ್ವಕವಾಗಿ ದುರುದ್ದೇಶದಿಂದ ನ್ಯಾಯಾಧೀಶರ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದರು.

complaint-against-to-ct-ravi-
ಸಿ.ಟಿ. ರವಿ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ದೂರು

By

Published : May 19, 2021, 4:51 PM IST

ಅಥಣಿ :ಇತ್ತೀಚೆಗೆ ಆಕ್ಸಿಜನ್ ಕೊರತೆ ನೀಗಿಸಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದ್ದು, ಇದಕ್ಕೆ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಹೇಳಿಕೆ ಖಂಡಿಸಿ ಅಥಣಿಯಿಂದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ದೂರು ಸಲ್ಲಿಸಲಾಗಿದೆ.

ಸಿ.ಟಿ. ರವಿ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ದೂರು

ಓದಿ: ನ್ಯಾಯಾಂಗದ ವಿರುದ್ಧ ಸಿಟಿ ರವಿ, ಡಿವಿಎಸ್ ಟೀಕೆ: ಬೆಂಗಳೂರು ವಕೀಲರ ಸಂಘ ಆಕ್ಷೇಪ

ಉಚ್ಚ ನ್ಯಾಯಾಲಯ, ಕೊರೊನಾ ಸಂದಿಗ್ಧ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಕೆಲವು ವಿಷಯಗಳಲ್ಲಿ ಸೂಚನೆ ನೀಡಿತ್ತು. ಈ ಸೂಚನೆ ಸೂಕ್ತವೆಂದು ಸರ್ವೋನ್ನತ ನ್ಯಾಯಾಲಯ ಎತ್ತಿ ಹಿಡಿದಿತ್ತು.

ಆದರೆ, ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಉದ್ದೇಶ ಪೂರ್ವಕವಾಗಿ ದುರುದ್ದೇಶದಿಂದ ನ್ಯಾಯಾಧೀಶರ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದರು.

ಸಿ.ಟಿ. ರವಿ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ದೂರು

ಸಿ.ಟಿ. ರವಿ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಇಬ್ಬರು ಚುನಾವಣೆ ಪ್ರತಿನಿಧಿಗಳ ಮೇಲೆ ನ್ಯಾಯಾಂಗ ನಿಂದನೆ ಆರೋಪದಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರಿಗೆ ಇಮೇಲ್ ಮೂಲಕ ವೃತ್ತಿಯಲ್ಲಿ ವಕೀಲನಾಗಿರುವ ಭೀಮನಗೌಡ ಪರಗೊಂಡ ಎಂಬುವರು ದೂರು ಸಲ್ಲಿಸಿದ್ದಾರೆ.

ಸಿ.ಟಿ. ರವಿ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ದೂರು

ABOUT THE AUTHOR

...view details