ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಅಭ್ಯರ್ಥಿ ಸತೀಶ್​ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ್ ಅಬ್ಬರದ ಮತ ಪ್ರಚಾರ - Satish Jarakiholi, MLA Lakshmi Hebbalkar made promotion

ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್​ ಜಾರಕಿಹೊಳಿ ಇಂದು ಬೆಳಗಾವಿಯ ಉಚಗಾಂವ ಗ್ರಾಮದಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಈ ವೇಳೆ ಅವರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ಸಾಥ್ ಕೊಟ್ಟರು.

Satish Jarakiholi, MLA Lakshmi Hebbalkar made promotion
ಸತೀಶ್​ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅಬ್ಬರದ ಪ್ರಚಾರ

By

Published : Mar 31, 2021, 3:10 PM IST

ಬೆಳಗಾವಿ:ಗ್ರಾಮೀಣ ಮತಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್​​ ಜಾರಕಿಹೊಳಿ‌ ಅವರೊಂದಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮತ ಬೇಟೆ ನಡೆಸಿದ್ದಾರೆ.

ಸತೀಶ್​ ಹಾಗೂ ಹೆಬ್ಬಾಳಕರ್‌ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ವಾದ್ಯ,ಮೇಳಗಳೊಂದಿಗೆ ಅದ್ದೂರಿ ಸ್ವಾಗತ ಕೋರಿದರು.

ಸತೀಶ್​ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚುನಾವಣಾ ಪ್ರಚಾರ

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಸತೀಶ್​​ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ಶಕ್ತಿ. ಅವರು ಕಳೆದ 30 ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು, ಸಾಮಾಜಿಕ ಚಟುವಟಿಕೆಗಳು ಸೇರಿದಂತೆ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನಾಯಕ. ಹೀಗಾಗಿ, ಏಪ್ರಿಲ್ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಸತೀಶ್​​ ಅಣ್ಣನನ್ನು ಗೆಲ್ಲಿಸುವ ಮೂಲಕ ದಿಲ್ಲಿಗೆ ಸಂದೇಶ ರವಾನಿಸಬೇಕಾಗಿದೆ ಎಂದರು.

ಸತೀಶ್​​ ಜಾರಕಿಹೊಳಿ ಗೆಲುವಿಗೆ ಶಪಥ

ಸತೀಶ್​​ ಜಾರಕಿಹೊಳಿ ಅವರ ಗೆಲುವಿಗೆ ಕ್ಷೇತ್ರದ ಪ್ರತಿಯೊಬ್ಬ ಕಾರ್ಯಕರ್ತರು ಹಗಲಿರುಳೆನ್ನದೆ ಶ್ರಮಿಸುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಕಾರ್ಯಕರ್ತರಿಂದ ಶಪಥ ಮಾಡಿಸಿದರು.

ಗ್ರಾಮೀಣ ಕ್ಷೇತ್ರದ ಮತದಾರರ ಬಗ್ಗೆ ಸತೀಶ್​​ ಮೆಚ್ಚುಗೆ

ಅಭ್ಯರ್ಥಿ ಸತೀಶ್​ ಜಾರಕಿಹೊಳಿ ಮಾತನಾಡಿ, ಗ್ರಾಮೀಣ ಕ್ಷೇತ್ರದ ಜನರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದಂತೆ, ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ನನ್ನನ್ನು ಗೆಲ್ಲಿಸಬೇಕು. ಇದರಿಂದ ಶಾಸಕರು ಹಾಗೂ ಸಂಸದರು ಸೇರಿ ಮತಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ಇದನ್ನೂ ಓದಿ: ಬೈ ಎಲೆಕ್ಷನ್ : ಮುನಿಸು ಮರೆತು ಒಂದಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್‌

ABOUT THE AUTHOR

...view details