ಅಥಣಿ (ಬೆಳಗಾವಿ):ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಸಾಧಿಸುತ್ತಾರೆ. ಮತದಾರ ಬಿಜೆಪಿಗೆ ಹೆಚ್ಚಿನ ಮತ ನೀಡುತ್ತಾನೆ. ಇದರಿಂದ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ವಾಮಮಾರ್ಗದಿಂದ ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದ್ದು, ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಆರೋಪಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಸಂಕ ಅವರು ನನ್ನನ್ನು ನೇರವಾಗಿ ಭೇಟಿಯಾಗಿಲ್ಲ. ಒಬ್ಬರ ಫೋನ್ ಕೆರೆ ಮೂಲಕ ಮಾತನಾಡಿದ್ದಾರೆ. ಸುನೀಲ್ ಸಂಕ ಮನೆಯಲ್ಲಿ ಸತ್ಯಹರಿಶ್ಚಂದ್ರ ಬಾಡಿಗೆಗಿದ್ದ ರೀತಿಯಲ್ಲಿ ಮಾತನಾಡುತ್ತಾರೆ. ಸಮಯ, ಸಂದರ್ಭ ಬಂದಾಗ ನಾನು ಉತ್ತರ ನೀಡುತ್ತೇನೆ ಎಂದು ಸವದಿ ಖಾರವಾಗಿ ಪ್ರತಿಕ್ರಿಯಿಸಿದರು.