ಕರ್ನಾಟಕ

karnataka

ETV Bharat / state

ಉತ್ತರಪ್ರದೇಶ ರೈತರ‌ ಹತ್ಯೆಗೆ ಖಂಡನೆ: ಸತೀಶ್ ಜಾರಕಿಹೊಳಿ‌ ನೇತೃತ್ವದಲ್ಲಿ ಪಂಜಿನ ಮೆರವಣಿಗೆ

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ರೈತರ‌ ಹತ್ಯೆ ಖಂಡಿಸಿ ಕಾಂಗ್ರೆಸ್ ಕಿಸಾನ್ ಘಟಕದಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.

protest
ಪಂಜಿನ ಮೆರವಣಿಗೆ

By

Published : Oct 9, 2021, 7:38 AM IST

Updated : Oct 9, 2021, 9:46 AM IST

ಬೆಳಗಾವಿ: ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಕೇಂದ್ರ ಸಚಿವರ ಮಗನ ಬೆಂಗಾವಲು ಪಡೆ ಕಾರು ಹರಿದ ಪರಿಣಾಮ 8 ರೈತರು ಮೃತಪಟ್ಟಿರುವ ಘಟನೆ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಿಸಾನ್ ಘಟಕದ ಪದಾಧಿಕಾರಿಗಳು ನಿನ್ನೆ ರಾತ್ರಿ ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ‌ಭವನದಿಂದ ಆರಂಭವಾದ ಪಂಜಿನ ಮೆರವಣಿಗೆ ಆರ್​ಟಿಒ ವೃತ್ತದಲ್ಲಿ ಸಂಚರಿಸಿ ನಂತರ ಕಾಂಗ್ರೆಸ್ ‌ಭವನದಲ್ಲಿ ಸಮಾಪ್ತಿಗೊಂಡಿತು. ಈ ವೇಳೆ ಕೈ ಕಾರ್ಯಕರ್ತರು ಕೇಂದ್ರ ‌ಹಾಗೂ ಯುಪಿ ಬಿಜೆಪಿ ‌ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರ‌ ಹತ್ಯೆ ಖಂಡಿಸಿ ಕಾಂಗ್ರೆಸ್ ಕಿಸಾನ್ ಘಟಕದಿಂದ ಪಂಜಿನ ಮೆರವಣಿಗೆ

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ, ಲಖೀಂಪುರದಲ್ಲಿ ನಡೆದ ರೈತರ ಹತ್ಯೆ ಖಂಡನೀಯ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ‌ ಅಧ್ಯಕ್ಷ ವಿನಯ್​ ನಾವಲಗಟ್ಟಿ ಮಾತನಾಡಿ, ಪ್ರಧಾನಿ ಮೋದಿಯವರು ರೈತರ ಹತ್ಯೆ ಘಟನೆಯ ಬಗ್ಗೆ ಯಾಕೆ ತುಟಿ ಬಿಚ್ಚುತ್ತಿಲ್ಲ. ರೈತರು ತಮ್ಮ ಹಕ್ಕು ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರೆ ಸರ್ಕಾರ ಅವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಜನರ ಪರವಾಗಿ ಧ್ವನಿ ಎತ್ತುವ ಪ್ರತಿಪಕ್ಷದ ನಾಯಕರನ್ನು ಸಹ ಹತ್ತಿಕ್ಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಿಸಾನ್ ಘಟಕದ ರಾಜ್ಯ ಸಂಚಾಲಕ ರಾಜೇಂದ್ರ ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಕಲ್ಲಪ್ಪ ಲಕ್ಕಾರ್, ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ, ಮಂಜು ಕಾಂಬಳೆ ಉಪಸ್ಥಿತರಿದ್ದರು.

Last Updated : Oct 9, 2021, 9:46 AM IST

ABOUT THE AUTHOR

...view details