ಕರ್ನಾಟಕ

karnataka

ETV Bharat / state

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗಾಗಿ ತಂಡ ರಚಿಸಿದ ಕಾಂಗ್ರೆಸ್..

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಯ ಆಯ್ಕೆಗಾಗಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮಿತಿಯೊಂದನ್ನು ರಚನೆ ಮಾಡಿದ್ದಾರೆ..

belagavi
ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ತಂಡ ರಚನೆ

By

Published : Nov 11, 2020, 7:26 PM IST

ಬೆಳಗಾವಿ: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಯವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಯ ಆಯ್ಕೆಗಾಗಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮಿತಿಯೊಂದನ್ನು ರಚನೆ ಮಾಡಿದ್ದು, ಸಮಿತಿ ಅಧ್ಯಕ್ಷರಾಗಿ ಶಾಸಕ ಎಂ.ಬಿ ಪಾಟೀಲ್, ಸಂಯೋಜಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ

ಸಮಿತಿಯ ಸದಸ್ಯರನ್ನಾಗಿ ಎಲ್.ಹನುಮಂತಯ್ಯ, ಹೆಚ್.ಎಂ.ರೇವಣ್ಣ, ವೀರಕುಮಾರ್ ಪಾಟೀಲ್, ಅಜಯ್ ಕುಮಾರ್ ಸರ್ ನಾಯಕ್, ಅನಿಲ್ ಲಾಡ್, ಜಿ.ಎಸ್.ಪಾಟೀಲ್, ಬಸವರಾಜ್ ಶಿವಣ್ಣನವರ್, ಶ್ರೀನಿವಾಸ್ ಮಾನೆ, ನಾಗರಾಜ್ ಛಬ್ಬಿ ಅವರನ್ನು ಆಯ್ಕೆ ಮಾಡಲಾಗಿದೆ‌.

ಆಯ್ಕೆಯಾದ ಎಲ್ಲಾ ನಾಯಕರು, ಬೆಳಗಾವಿ ಕ್ಷೇತ್ರದ ವ್ಯಾಪ್ತಿಯ ಹಿರಿಯ ನಾಯಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳು, ಹಾಲಿ/ ಮಾಜಿ ಸಂಸದರು, ಶಾಸಕರು, 2019 ರ ಲೋಕಸಭಾ ಮತ್ತು 2018 ರ ವಿಧಾನಸಭಾ ಅಭ್ಯರ್ಥಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತು ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಆಕಾಂಕ್ಷಿಗಳ ಪಟ್ಟಿಯನ್ನು ತಯಾರಿಸಿ ಕೆಪಿಸಿಸಿಗೆ ಕೂಡಲೇ ಸಲ್ಲಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೋರಿದ್ದಾರೆ.

ABOUT THE AUTHOR

...view details