ಚಿಕ್ಕೋಡಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದ ಮಹೇಶ್ ಕುಮಟಳ್ಳಿ ರಾಜೀನಾಮೆ ನೀಡಬಾರದಿತ್ತು ಎಂಬ ಚರ್ಚೆಗಳು ಈಗ ಅಥಣಿ ಮತ ಕ್ಷೇತ್ರದಲ್ಲಿ ಸದ್ದು ಮಾಡುತ್ತಿವೆ.
ಮಹೇಶ್ ಕುಮಟಳ್ಳಿ ರಾಜೀನಾಮೆ ವಿರುದ್ಧ ಕಾರ್ಯಕರ್ತರ ಆಕ್ರೋಶ - kannadanews
ಅಥಣಿ ಶಾಸಕ ಮಹೇಶ್ ಕುಮಟಳ್ಳಿ ರಾಜೀನಾಮೆ ನೀಡಿರುವುದನ್ನು ಕ್ಷೇತ್ರದ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಮತದಾರರು ಮಹೇಶ್ ಕುಮಟಳ್ಳಿ ಅವರಿಗೆ ಹೇಗೆಲ್ಲಾ ಬೆಂಬಲ ನೀಡಿ ಮತ ಹಾಕಿ ಗೆಲ್ಲಿಸಿದ್ದಾರೆ ಎಂದು ಚರ್ಚೆ ಮಾಡಿದ್ದಾರೆ. ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಯಲ್ಲಪ್ಪಾ ಕಾಂಬಳೆ ಎಂಬುವವರು ವಿಧಾನಸಭಾ ಚುನಾವಣಾ ವೇಳೆ ಮಹೇಶ್ ಕುಮಟಳ್ಳಿ ಗೆಲುವಿಗಾಗಿ ಸಾಕಷ್ಟು ಪ್ರಚಾರ ಕೈಗೊಂಡಿದ್ದರು. ಕುಮಟಳ್ಳಿ ಅವರಿಗೆ ಬೆಂಬಲ ಸೂಚಿಸಿ ಸಪ್ತಸಾಗರ ಗ್ರಾಮದ ಪ್ರತಿ ಮನೆಗೆ ಹೋಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಕೇಳಿಕೊಂಡಿದ್ದರು. ಮಹೇಶ್ ಕುಮಟಳ್ಳಿ ಆಯ್ಕೆಯಾಗುವಂತೆ ಗ್ರಾಮದ ದೇವತೆಗೆ ಹರಕೆ ಕೂಡಾ ಮಾಡಿ ಗೆದ್ದ ನಂತರ ದೇವಿಗೆ ಧೀರ್ಗ ದಂಡ ನಮಸ್ಕಾರ ಹಾಕಿ ಹರಕೆ ಕೂಡಾ ತೀರಿಸಿದ್ದಾರೆ.
ಆದರೆ ಕುಮಟಳ್ಳಿ ಮಾತ್ರ ಈವರೆಗೂ ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಕಾರ್ಯವನ್ನೂ ಮಾಡದೆ ಈಗ ರಾಜೀನಾಮೆ ಕೊಟ್ಟಿದ್ದಾರೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.