ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.
ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ - CBI raids latest news
ಡಿಕೆಶಿ ಮನೆ ಮೇಲೆ ಆಗಿರುವ ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು..
Protest
ಕಾಂಗ್ರೆಸ್ ಯುವ ನಾಯಕ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಡಿಕೆಶಿ ಮನೆ ಮೇಲೆ ಆಗಿರುವ ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜೊತೆಗೆ ಕೆಲವರು ಮಾಸ್ಕ್ ಧರಿಸದೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.