ಕರ್ನಾಟಕ

karnataka

ETV Bharat / state

ತುರ್ತು ಪರಿಹಾರ, ಪುನರ್ವಸತಿ ಕಲ್ಪಿಸುವಲ್ಲಿ ವಿಳಂಬ: ಅಥಣಿಯಲ್ಲಿ ಕಾಂಗ್ರೆಸ್​​ ಪ್ರತಿಭಟನೆ - ಕೇಂದ್ರ ಸರ್ಕಾರದ ನೆರೆ ಪರಿಹಾರ

ನೆರೆ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ ಹಾಗೂ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್​ ಕಾರ್ಯಕರ್ತರು ಅಥಣಿಯ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿದರು.

ನೆರೆ ಹಾವಳಿ ಪ್ರದೇಶದ ಸಂತ್ರಸ್ತರಿಗೆ ತುರ್ತು ಪರಿಹಾರ ನೀಡುವಂತೆ ಕಾಂಗ್ರೆಸ್​ ಪ್ರತಿಭಟನೆ

By

Published : Sep 13, 2019, 1:00 PM IST

ಬೆಳಗಾವಿ: ನೆರೆ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ, ಪುನರ್ವಸತಿ ಹಾಗೂ ಬೆಳೆ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಥಣಿ ಕಾಂಗ್ರೆಸ್ ಸಮಿತಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನೆರೆ ಹಾವಳಿ ಪ್ರದೇಶದ ಸಂತ್ರಸ್ತರಿಗೆ ತುರ್ತು ಪರಿಹಾರ ನೀಡುವಂತೆ ಕಾಂಗ್ರೆಸ್​ ಪ್ರತಿಭಟನೆ

ಅಥಣಿ ಮಿನಿ ವಿಧಾನಸೌದ ಎದುರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಕೂಡಲೇ ಪರಿಹಾರ ಕಾರ್ಯ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಅಥಣಿ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು,

ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ನೆರೆಪೀಡಿತ ಜನರಿಗೆ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಜನರಿಗೆ ಮಲತಾಯಿ ಧೋರಣೆ ತೋರುತ್ತಿರುವ ಯಡಿಯೂರಪ್ಪ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ABOUT THE AUTHOR

...view details