ಕರ್ನಾಟಕ

karnataka

ETV Bharat / state

ಬೆಳಗಾವಿ ಪಾಲಿಕೆ ಚುನಾವಣೆ: ಮಧ್ಯರಾತ್ರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​ - belagavi municipal election candidates list

ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್‍ಗಳಿಗೆ 2021ರ ಸೆಪ್ಟಂಬರ್ 3 ರಂದು ಚುನಾವಣೆ ನಡೆಯಲಿದ್ದು, ಮಧ್ಯರಾತ್ರಿ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

congress
ಕಾಂಗ್ರೆಸ್ ನಗರ ಘಟಕದ ಜಿಲ್ಲಾಧ್ಯಕ್ಷ ರಾಜು ಸೇಠ್

By

Published : Aug 23, 2021, 9:38 AM IST

ಬೆಳಗಾವಿ: ಇದೇ ಮೊದಲ ಬಾರಿಗೆ ಪಕ್ಷದ ಚಿಹ್ನೆ ಮೇಲೆ ಬೆಳಗಾವಿ ಮಹಾನಗರ ‌ಪಾಲಿಕೆ ಚುನಾವಣೆ ‌ಎದುರಿಸಲು ಸಿದ್ಧವಾಗಿರುವ ಕಾಂಗ್ರೆಸ್ ‌51 ಅಭ್ಯರ್ಥಿಗಳ ಹೆಸರು ಘೋಷಿಸಿದೆ.

ಸೆಪ್ಟೆಂಬರ್ 3 ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ‌ನಾಯಕರು ಮಧ್ಯರಾತ್ರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. 58 ವಾರ್ಡ್‌ಗಳ ಪೈಕಿ 51 ವಾರ್ಡ್​ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ನಗರ ಘಟಕದ ಜಿಲ್ಲಾಧ್ಯಕ್ಷ ರಾಜು ಸೇಠ್, ಗ್ರಾಮೀಣ ಘಟಕದ ಅಧ್ಯಕ್ಷ ವಿನಯ್ ನಾವಲಗಟ್ಟಿಯಿಂದ ಬಿಡುಗಡೆ ಮಾಡಿದರು.

ಇದನ್ನೂ ಓದಿ:ಕಲಬುರಗಿ ಪಾಲಿಕೆ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಇಂದು ಬೆಳಗ್ಗೆ 11 ಗಂಟೆಯೊಳಗೆ ಉಳಿದ 7 ವಾರ್ಡ್‌ಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ನಿನ್ನೆ ರಾತ್ರಿ ಬಿಜೆಪಿ ಕೂಡ 21 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತ್ತು. ಇಂದು ಉಳಿದ 37 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಲಿದೆ.

ABOUT THE AUTHOR

...view details