ಕರ್ನಾಟಕ

karnataka

ETV Bharat / state

ಜತ್​ನಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಭರ್ಜರಿ ಗೆಲುವು: ಡಿಸಿಎಂ ಸವದಿಗೆ ಭಾರಿ ಮುಖಭಂಗ - ವಿಕ್ರಮ್ ಸಾವಂತ ಜಯಭೇರಿ

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್​​ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಭಾರಿ ಜಿದ್ದಾಜಿದ್ದಿನ ಪೈಪೋಟಿಗೆ ಕಾರಣವಾಗಿತ್ತು. ಸದ್ಯ ಜತ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮ್ ಸಾವಂತ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಲಾಸ ರಾವ್ ಜಗತಪ್ ವಿರುದ್ಧ 32 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಜತ್ತನಲ್ಲಿ ಕಾಂಗ್ರೆಸ್ ಗೆಲುವು ರಾಜ್ಯ ಡಿಸಿಎಂಗೆ ಭಾರಿ ಮುಖಭಂಗ

By

Published : Oct 24, 2019, 6:53 PM IST

ಅಥಣಿ:ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್​​ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಭಾರಿ ಜಿದ್ದಾಜಿದ್ದಿನ ಪೈಪೋಟಿಗೆ ಕಾರಣವಾಗಿತ್ತು. ಸದ್ಯ ಜತ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮ್ ಸಾವಂತ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಲಾಸ ರಾವ್ ಜಗತಪ್ ವಿರುದ್ಧ 32 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಡಿಸಿಎಂ ಲಕ್ಷ್ಮಣ ಸವದಿ ಜತ್​​ ಕ್ಷೇತ್ರದಲ್ಲಿಯೇ ಮೊಕ್ಕಾಂ ಹೂಡಿ ಪ್ರಚಾರ ಮಾಡಿದರೂ ಬಿಜೆಪಿ ಅಭ್ಯರ್ಥಿ ಗೆಲುವು ಸಾಧ್ಯವಾಗಿಲ್ಲ. ಸೋತವರು ಗೆಲ್ಲಿಸಲು ಸಾಧ್ಯವೇ ಅಂತಾ ಅಥಣಿ ಕಾಂಗ್ರೆಸ್ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳ ಸುರಿಮಳೆ ಸುರಿಸಿದ್ದಾರೆ.

ಜತ್​ನ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ಎದುರಾಗಿತ್ತು. ಜತ್​​ ವಿಧಾನಸಭಾ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕರ್ನಾಟಕದ ಅಥಣಿ ಪಕ್ಕದ ಮಹಾರಾಷ್ಟ್ರ ರಾಜ್ಯದ ಜತ್​​​ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷದ ನಾಯಕರು ಪ್ರಚಾರ ಮಾಡಿದ್ದರು. ಬಿಜೆಪಿ ಪಕ್ಷದಿಂದ ವಿಲಾಸ ರಾವ್ ಜಗಪತ್ ಸ್ಪರ್ಧೆ ಮಾಡಿದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಕ್ರಮ್ ಸಾವಂತ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಗಳಾಗಿ ಕಣದಲ್ಲಿದ್ದರು.

ಬಿಜೆಪಿ ಪಕ್ಷದಿಂದ ವಿಲಾಸ ರಾವ್ ಜಗತಪ್ ಪರವಾಗಿ ನಮ್ಮ ರಾಜ್ಯದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮತ್ತು ಉಪ ಮುಖ್ಯಮಂತ್ರಿ ಡಿಸಿಎಂ ಲಕ್ಷ್ಮಣ ಸವದಿ ಭಾರಿ ಪ್ರಚಾರ ಮಾಡಿದ್ದರು. ಕಾಂಗ್ರೆಸ್ ಪಕ್ಷದಿಂದ ವಿಕ್ರಮ್ ಸಾವಂತ ಪರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರಚಾರ ಕೈಗೊಂಡಿದ್ದರು.

ಮಹಾರಾಷ್ಟ್ರದ ಜತ್​ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಡಿಸಿಎಂ ಲಕ್ಷ್ಮಣ ಸವದಿ ವರ್ಸಸ್ ಎಂ.ಬಿ.ಪಾಟೀಲ್ ಎಂಬಂತೆ ಬಿಂಬಿತವಾಗಿತ್ತು. ಸದ್ಯ ಜತ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ವಿಕ್ರಮ್ ಸಾವಂತ ಜಯಭೇರಿ ಬಾರಿಸಿದ್ದು, ಡಿಸಿಎಂ ಲಕ್ಷ್ಮಣ ಸವದಿಗೆ ಮುಖಭಂಗವಾದಂತಾಗಿದೆ.

ABOUT THE AUTHOR

...view details