ಚಿಕ್ಕೋಡಿ:ನಿಪ್ಪಾಣಿ ಪಟ್ಟಣದ ಬಡವರಿಗೆ ಗುಂಪು ಮನೆಗಳ ನಿರ್ಮಾಣ ಕಾಮಗಾರಿಯ ಕಾರ್ಯಕ್ಕೆ ವಸತಿ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ ಮಾಡಿದರು.
ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದಲ್ಲಿ ರಾಜೀವ್ಗಾಂಧಿ ವಸತಿ ನಿಗಮ ನಿ. ಬೆಂಗಳೂರು ಜಿಲ್ಲಾಡಳಿತ ಹಾಗೂ ನಗರಸಭೆ ನಿಪ್ಪಾಣಿ ಇವರ ಸಂಯುಕ್ತಾಶ್ರಯದಲ್ಲಿ.
ಪಿಎಂಎವೈ- ಎಹೆಚ್‌ಸಿ ಯೋಜನೆಯಡಿ ನಿರ್ಮಿಸಲು ಉದ್ದೇಶಿಸಿರುವ 2052 (ಜಿ+2) ಮಾದರಿಯ ಗುಂಪು ಮನೆಗಳ ನಿರ್ಮಾಣ ಕಾಮಗಾರಿಯ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಬ ಜೊಲ್ಲೆ ಸಾಥ್ ನೀಡಿದ್ದಾರೆ.