ಚಿಕ್ಕೋಡಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ದೇವಸ್ಥಾನಕ್ಕೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಇಲಾಖೆಯ ಸಚಿವ ಶ್ರೀಮಂತ ಪಾಟೀಲ್, ಕರ್ನಾಟಕ ಉತ್ತರ ಪ್ರಾಂತ ಸಹ ಸಂಘ ಸಂಚಾಲಕರಾದ ಅರವಿಂದ ದೇಶಪಾಂಡೆ ಮೂಲಕ 15 ಲಕ್ಷ ರೂಪಾಯಿಯ ಚೆಕ್ ನೀಡಿದ್ದಾರೆ.
ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 15 ಲಕ್ಷ ರೂ. ದೇಣಿಗೆ ನೀಡಿದ ಸಚಿವ ಶ್ರೀಮಂತ ಪಾಟೀಲ್ - Minister Shrimanth Patel lastest news
ಅಲ್ಪಸಂಖ್ಯಾತ ಇಲಾಖೆಯ ಸಚಿವ ಶ್ರೀಮಂತ ಪಾಟೀಲ್ ಅವರು ರಾಮ ಮಂದಿರ ನಿರ್ಮಾಣಕ್ಕೆ 15 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
15 ಲಕ್ಷ ರೂ. ದೇಣಿಗೆ ನೀಡಿದದ ಸಚಿವ ಶ್ರೀಮಂತ ಪಾಟೀಲ್
ಓದಿ:'ಅದು ಕೇಂದ್ರಕ್ಕೆ ಬಿಟ್ಟ ವಿಷಯ, ಆ ವಿಚಾರ ಮಾತನಾಡುವಷ್ಟು ದೊಡ್ಡವನಲ್ಲ'
ಚೆಕ್ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಬಡವರು, ಶ್ರೀಮಂತರು ಎನ್ನದೇ ಪ್ರತಿಯೊಬ್ಬರು ರಾಮ ಮಂದಿರ ನಿರ್ಮಾಣಕ್ಕಾಗಿ ದಾನ ನೀಡುತ್ತಿದ್ದಾರೆ. ನಾನೂ ಕೂಡ ರಾಮ ಮಂದಿರ ನಿರ್ಮಾಣಕ್ಕೆ ನನ್ನ ಕೈಯಿಂದ ಆದಷ್ಟು ಸಹಾಯ ಮಾಡಿದ್ದೇನೆ ಎಂದರು.