ಬೆಳಗಾವಿ:ಹೊರಗುತ್ತಿಗೆ ನೌಕರರನ್ನು ಖಾಯಂ ಸರ್ಕಾರಿ ನೌಕರರೆಂದು ಪರಿಗಣಿಸಿ ಹಾಗೂ ಕೆಲಸದಿಂದ ವಜಾಗೊಳಿಸಿದ ಉದ್ಯೋಗಿಗಳನ್ನು ವಾಪಸ್ ತಗೆದುಕೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಲದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗುತ್ತಿಗೆ ನೌಕರರ ಖಾಯಂಗೊಳಿಸಲು ಆಗ್ರಹಿಸಿ ಧರಣಿ - KN_BGM_02_20_protest_Vinayak_KA10009
ನಗರದ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ನೌಕರರ ಪ್ರತಿಭಟನಾ ಮೆರವಣಿಗೆ
ನಗರದ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ನೌಕರರ ಮಹಾಮಂಡಲ ಅಧ್ಯಕ್ಷ ಕೆ.ಎಸ್ ಶರ್ಮಾ ಮಾತನಾಡಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೊರಗುತ್ತಿಗೆ ನೌಕರರ ಹಿತರಕ್ಷಣೆ ಕಾಯುವಂತೆ ಸರ್ಕಾರ ಮುಂದಾಗಬೇಕು. ಹೊರ ರಾಜ್ಯಗಳಂತೆ ಕರ್ನಾಟಕದಲ್ಲೂ ಹೊರಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಿ ಅವರಿಗೆ ವೇತನ ಭತ್ಯೆ ನೀಡಬೇಕು ಎಂದು ಒತ್ತಾಯಿಸಿದರು.