ಬೆಳಗಾವಿ:ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹವನ್ನು ಬೆಳಗಾವಿ ತಾಲೂಕಿನ ಸ್ವಗ್ರಾಮ ಬಡಸ ಗ್ರಾಮಕ್ಕೆ ತರಲಾಗಿದೆ. ಸಂತೋಷ್ ಪಾಟೀಲ್ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ 40ರಷ್ಟು ಕಮಿಷನ್ ಆರೋಪ ಮಾಡಿ ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದರು.
ಉಡುಪಿಯಲ್ಲಿರುವ ಖಾಸಗಿ ಲಾಡ್ಜ್ನಲ್ಲಿ ಸಂತೋಷ್ ಪಾಟೀಲ್ ಮೃತದೇಹ ಪತ್ತೆಯಾಗಿತ್ತು. ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಮೂಲಕ ಬಡಸ ಗ್ರಾಮಕ್ಕೆ ಮೃತದೇಹ ತರಲಾಗಿದೆ. ಅಲ್ಲಿದ್ದ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ ಕುಟುಂಬಸ್ಥರು, ಆರೋಪಿಗಳನ್ನು ಬಂಧಿಸಲು ಅಗತ್ಯವಾದ ದಾಖಲೆಗಳು ನಮ್ಮ ಬಳಿಯೂ ಸಾಕಷ್ಟಿವೆ. ಅವುಗಳನ್ನು ಕೊಡಲಾಗುವುದು. ಆರೋಪಿಗಳನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.