ಕರ್ನಾಟಕ

karnataka

ETV Bharat / state

ನನ್ನ ಹೇಳಿಕೆ ಹಿಂಪಡೆಯುತ್ತಿದ್ದೇನೆ.. ಸಿಎಂಗೆ ಪತ್ರ ಬರೆದ ಸತೀಶ್​ ಜಾರಕಿಹೊಳಿ - ತನಿಖೆ ಮಾಡಿ ಎಂದು ಸತೀಶ್​ ಜಾರಕಿಹೊಳಿ ಆಗ್ರಹ

ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ್ದ ಹಿಂದೂ ಶಬ್ದದದ ಬಳಕೆ ಕುರಿತು ತೇಜೋವಧೆ ಮಾಡಲಾಗುತ್ತಿದೆ. ನನ್ನ ಹೇಳಿಕೆ ಕುರಿತು ಸತ್ಯಾಸತ್ಯತೆ ತಿಳಿಯಲು ತನಿಖೆ ಸಮಿತಿ ರಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಪತ್ರ ಬರೆದು ಮನವಿ ಮಾಡಿದ್ದಾರೆ.

Controversial statement about the word Hindu  Satish Jarakiholi wrote letter to the CM Bommai  Satish Jarakiholi Controversial statement  Hindu Controversial statement news  ಸಿಎಂಗೆ ಪತ್ರ ಬರೆದ ಸತೀಶ್​ ಜಾರಕಿಹೊಳಿ  ಮಾನವ ಬಂಧುತ್ವ ವೇದಿಕೆ ಕರ್ನಾಟಕ ಕಾರ್ಯಕ್ರಮ  ಹಿಂದೂ ಶಬ್ದದದ ಬಳಕೆ ಕುರಿತು ನನ್ನ ತೇಜೋವಧೆ  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ‌ ಪತ್ರ  ಹಿಂದೂ ಪದದ ಬಗ್ಗೆ ವಿವಾದಿತ ಹೇಳಿಕೆ  ಸತೀಶ್​ ಜಾರಕಿಹೊಳಿ ಸಿಎಂಗೆ ಪತ್ರ  ತನಿಖೆ ಮಾಡಿ ಎಂದು ಸತೀಶ್​ ಜಾರಕಿಹೊಳಿ ಆಗ್ರಹ  ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ
ಸಿಎಂಗೆ ಪತ್ರ ಬರೆದ ಸತೀಶ್​ ಜಾರಕಿಹೊಳಿ

By

Published : Nov 9, 2022, 6:19 PM IST

ಬೆಳಗಾವಿ:ಹಿಂದೂ ಪದದ ಬಗ್ಗೆ ವಿವಾದಿತ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಸಿಎಂಗೆ ಪತ್ರ ಬರೆದಿದ್ದಾರೆ. ನಾನು ನನ್ನ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಟಿಸಿದವರ ಮೇಲೆ ತನಿಖೆ ಮಾಡಿ ಎಂದು ಸತೀಶ್​ ಜಾರಕಿಹೊಳಿ ಆಗ್ರಹಿಸಿದ್ದಾರೆ.

ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತ ದೇಶಕ್ಕೆ ಹೇಗೆ ಬಂತು.. ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕೆಟ್ಟದಾಗಿ ಬಿಂಬಿಸಿದ್ದಾರೆ ಎಂದು ಹೇಳಿದ್ದೇನೆ. ಇದು ಸಾರ್ವಜನಿಕವಾಗಿ ಚರ್ಚೆ ಆಗಬೇಕಾಗಿರುವುದು ಬಹಳ ಅವಶ್ಯಕತೆ ಇದೆ ಎಂದು ಸಹ ಹೇಳಿದ್ದೆ. ಇದನ್ನು ನಾನು ವಿಕಿಪೀಡಿಯಾ, ಪುಸ್ತಕಗಳು, ಶಬ್ದಕೋಶಗಳು ಮತ್ತು ಇತಿಹಾಸಕಾರರ ಬರಹಗಳ ಉಲ್ಲೇಖದ ಮೇಲೆ ನನ್ನ ಭಾಷಣ ಆಧಾರಿತವಾಗಿರುತ್ತದೆ.

ಸಿಎಂಗೆ ಪತ್ರ ಬರೆದ ಸತೀಶ್​ ಜಾರಕಿಹೊಳಿ

ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿರುತ್ತಾರೆ. ಜೊತೆಗೆ ನನಗೆ ತೇಜೋವಧೆ ಹಾಗೂ ಹಾನಿವುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿರುತ್ತದೆ. ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಟಿಸಿದವರ ಮೇಲೆ ತನಿಖೆ ಮಾಡುವಂತೆ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಸತೀಶ್​ ಜಾರಕಿಹೊಳಿ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು. ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ, ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕಿಡಾಗಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರ ಗೊಳಿಸುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ನಾನು ಹೇಳಿದ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಸಿಎಂಗೆ ಬರೆದಿರುವ ಪತ್ರದಲ್ಲಿ ಸತೀಶ್​ ಜಾರಕಿಹೊಳಿ ಉಲ್ಲೇಖಿಸಿದ್ದಾರೆ.

ಓದಿ:ಜಾರಕಿಹೊಳಿ ಸವಾಲನ್ನು ಬಿಜೆಪಿ ಸ್ವೀಕಾರ ಮಾಡಲಿ: ಪ್ರಿಯಾಂಕ್ ಖರ್ಗೆ

ABOUT THE AUTHOR

...view details