ಚಿಕ್ಕೋಡಿ :ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಹಾರಾಷ್ಟ್ರದ ಗಡಿಯಲ್ಲಿರುವ ಕಾಗವಾಡ ತಾಲೂಕಿನ ಗ್ರಾಮಗಳಲ್ಲಿ ಈಗ ಕಟ್ಟೆಚ್ಚರ ವಹಿಸಬೇಕಾಗಿದೆ.
ಮಹಾರಾಷ್ಟ್ರ ಗಡಿ ಗ್ರಾಮಗಳಲ್ಲಿ ಕೊರೊನಾ ಭೀತಿ: ಕಟ್ಟೆಚ್ಚರ - chikkodi corona news
ಕಾಗವಾಡ ತಾಲೂಕಿನ ಶೇಡಬಾಳದಲ್ಲಿ ಐದು ಹಾಗೂ ಜುಗೂಳ ಗ್ರಾಮದಲ್ಲಿ ಒಬ್ಬರಿಗೆ ಕೊರೊನಾ ಪತ್ತೆಯಾಗಿದ್ದು, ಜುಗೂಳ ಗ್ರಾಮದ ಸೋಂಕಿತ ವ್ಯಕ್ತಿ ಇದ್ದ ಓಣಿಯನ್ನು ಸೀಲ್ಡೌನ್ ಮಾಡಲಾಗಿದೆ. ಜುಗೂಳ ಗ್ರಾಮದಲ್ಲಿ ಕಟ್ಟೆಚ್ಚರ ವಹಿಸಿದ್ದು, ಗ್ರಾ. ಪಂ. ಸಿಬ್ಬಂದಿಗಳು ಜನರಿಗೆ ಸಾಮಾಜಿಕ ಅಂತರದ ಜೊತೆಗೆ ಪ್ರತಿಯೊಬ್ಬರೂ ಮಾಸ್ಕ ಧರಿಸಬೇಕು ಎಂದು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಕಾಗವಾಡ ತಾಲೂಕಿನ ಶೇಡಬಾಳದಲ್ಲಿ ಐದು ಹಾಗೂ ಜುಗೂಳ ಗ್ರಾಮದಲ್ಲಿ ಒಬ್ಬರಿಗೆ ಕೊರೊನಾ ಪತ್ತೆಯಾಗಿದ್ದು, ಜುಗೂಳ ಗ್ರಾಮದ ಸೋಂಕಿತ ವ್ಯಕ್ತಿ ಇದ್ದ ಓಣಿಯನ್ನು ಸೀಲ್ಡೌನ್ ಮಾಡಲಾಗಿದೆ. ಜುಗೂಳ ಗ್ರಾಮದಲ್ಲಿ ಕಟ್ಟೆಚ್ಚರ ವಹಿಸಿದ್ದು ಗ್ರಾ. ಪಂ. ಸಿಬ್ಬಂದಿ ಜನರಿಗೆ ಸಾಮಾಜಿಕ ಅಂತರ ಜೊತೆಗೆ ಪ್ರತಿಯೊಬ್ಬರು ಮಾಸ್ಕ ಧರಿಸಬೇಕು ಎಂದು ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ.
ಜುಗೂಳ ಗ್ರಾಮದಲ್ಲಿ ಒಟ್ಟು 6 ಜನರ ಸ್ವ್ಯಾಬ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ ಎಂದು ಕಾಗವಾಡ ತಾಲೂಕು ವೈದ್ಯಾಧಿಕಾರಿ ಡಾ. ಪುಷ್ಪಲತಾ ತಿಳಿಸಿದ್ದಾರೆ.