ಬೆಳಗಾವಿ:ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬೆಳಗಾವಿಯ ಸದಾಶಿವನಗರವನ್ನು ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿ ಅನ್ವಯ ಮೈಕ್ರೋ ಕಂಟೇನ್ಮೆಂಟ್ ಪ್ರದೇಶವೆಂದು ಘೋಷಣೆ ಮಾಡಲಾಗಿದೆ.
ಮಹಾರಾಷ್ಟ್ರ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಕುಂದಾನಗರಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನಿನ್ನೆ 24 ಇದ್ದ ಕೊರೊನಾ ಕೇಸ್ ಇಂದು 37ಕ್ಕೇರಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗಿರುವ ಸದಾಶಿವನಗರದ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
ಇದರ ಜೊತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಕ್ಲೋರಿನ್ ದ್ರಾವಣ ಸಿಂಪಡಿಸಲಾಗಿದ್ದು, ಯಾವುದೇ ರೀತಿ ಸೋಂಕು ಹರಡದಂತೆ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಸೋಂಕು ತಡೆಗೆ ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.
ಇದನ್ನೂ ಓದಿ: ಥಿಯೇಟರ್ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮುಂದುವರಿಕೆ.... ಸಿನಿಮಾ ಮಂದಿಗೆ ಸಿಹಿ ಸುದ್ದಿ ನೀಡಿದ ಸಿಎಂ
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿಂದು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 37 ಜನರಿಗೆ ಮಹಾಮಾರಿ ಕೊರೊನಾ ವಕ್ಕರಿಸಿಕೊಂಡಿದೆ. ರಾಮದುರ್ಗ 20, ಬೆಳಗಾವಿ 8, ಗೋಕಾಕ್, ಚಿಕ್ಕೋಡಿ ತಲಾ 2, ಹುಕ್ಕೇರಿ 2 ಸೇರಿದಂತೆ ಒಟ್ಟು 37 ಜನರಿಗೆ ಕೊರಿನಾ ಸೋಂಕು ತಗುಲಿದೆ.