ಕರ್ನಾಟಕ

karnataka

ETV Bharat / state

ಮಾಜಿ ಶಾಸಕ ವಿಶ್ವನಾಥ ಪಾಟೀಲ್‌ಗೆ ಕೊರೊನಾ - Belagavi corona update news

ಬೆಳಗಾವಿಯ ಬೈಲಹೊಂಗಲ ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ್‌ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಕೆಎಲ್‌ಇ ಆಸ್ಪತ್ರೆಗೆ  ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Vishwanath patil
Vishwanath patil

By

Published : Sep 2, 2020, 9:53 AM IST

ಬೆಳಗಾವಿ: ಬೈಲಹೊಂಗಲ ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ್‌ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವೇಳೆ ಮನವಿ ಮಾಡಿಕೊಂಡಿರುವ ಮಾಜಿ ಶಾಸಕರು, ಕೋವಿಡ್ ದೃಢವಾದರೂ ನಾನು ಆರೋಗ್ಯವಾಗಿದ್ದೇನೆ. ನನ್ನ ಜೊತೆ ಪ್ರಾಥಮಿಕ, ದ್ವಿತೀಯ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಹೋಂ ಕ್ವಾರಂಟೈನ್ ಆಗಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಕೊರೊನಾ ವಿರುದ್ಧ ಹೋರಾಟ ಮಾಡೋಣ ಎಂದಿದ್ದಾರೆ.

ABOUT THE AUTHOR

...view details