ಬೆಳಗಾವಿ: ರಾಜ್ಯ ಸರ್ಕಾರದ ವಿದ್ಯಾಗಮ ಯೋಜನೆಯಡಿ ವಠಾರದಲ್ಲಿ ಪಾಠ ಕೇಳಿದ್ದ ಜಿಲ್ಲೆಯ ರಾಮದುರ್ಗ ತಾಲೂಕಿನ ಮತ್ತೆ 7 ಜನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ತಾಲೂಕಾಡಳಿತ ಗ್ರಾಮಕ್ಕೆ ಭೇಟಿ ನೀಡಿ ಮಕ್ಕಳ ಸುರಕ್ಷತೆ ಕ್ರಮಕ್ಕೆ ಮುಂದಾಗಿದೆ. ಎಂ.ತಿಮ್ಮಾಪುರ ಗ್ರಾಮದಲ್ಲಿ ಈ ಹಿಂದೆ 23 ಜನ ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿದ್ದು, ಇಂದು 7 ಜನ ಸೇರಿ ಒಟ್ಟು 30 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ವಿದ್ಯಾಗಮ ತರಗತಿಗಳಿಗೆ ಹಾಜರಾಗುತ್ತಿದ್ದ 130 ವಿದ್ಯಾರ್ಥಿಗಳಿಗೆ ಅ.4 ಹಾಗೂ 5 ರಂದು ಎರಡು ದಿನ ರ‍್ಯಾಪಿಡ್ ಟೆಸ್ಟ್ ಮಾಡಲಾಗಿತ್ತು. ಅದರಲ್ಲಿ ಒಟ್ಟು 30 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.