ಬೆಳಗಾವಿ:ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಲು ತಬ್ಲಿಘಿಗಳೇ ಕಾರಣ ಎಂದು ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.
ತಬ್ಲಿಘಿಗಳಿಂದಲೇ ಬೆಳಗಾವಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ: ಶೆಟ್ಟರ್ - ಸಚಿವ ಜಗದೀಶ್ ಶೆಟ್ಟರ್ ಲೆಟೆಸ್ಟ್ ನ್ಯೂಸ್
ದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಬಂದವರಿಂದ ಬೆಳಗಾವಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಬಂದವರಿಂದ ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಪರಿಣಾಮ ಬೀರಿದೆ. ತಬ್ಲಿಘಿ ಜಮಾತ್‌ಗೆ ಹೋಗಿರದಿದ್ದರೆ ಬೆಳಗಾವಿ ಗ್ರೀನ್ ಝೋನ್‌ನಲ್ಲಿ ಇರುತ್ತಿತ್ತು. ಕುಡಚಿ ಮತ್ತು ಹಿರೇಬಾಗೇವಾಡಿಯಲ್ಲೇ 32 ಕೊರೊನಾ ಪ್ರಕರಣಗಳಿವೆ. ಕುಡಚಿ, ಹಿರೇಬಾಗೇವಾಡಿಯ ತಲಾ 4 ಕುಟುಂಬಗಳಿಗೆ ಕೊರೊನಾ ಸೋಂಕು ಸೀಮಿತವಾಗಿದೆ. ಅದನ್ನು ಹೊರತುಪಡಿಸಿ ಬೇರೆ ಎಲ್ಲಿಯೂ ಕೊರೊನಾ ಪ್ರಕರಣ ಕಾಣಿಸಿಕೊಂಡಿಲ್ಲ ಎಂದರು.
ಇನ್ನು ಹುಬ್ಬಳ್ಳಿ, ಧಾರವಾಡದಲ್ಲಿಯೂ ದೆಹಲಿಗೆ ಹೋಗಿ ಬಂದವರಲ್ಲೇ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅದರ ನಿಯಂತ್ರಣಕ್ಕೆ ಅಧಿಕಾರಿಗಳು ಎಲ್ಲಾ ರೀತಿ ಪ್ರಯತ್ನ ಮಾಡುತ್ತಿದ್ದಾರೆ ಎಂದರು.