ಚಿಕ್ಕೋಡಿ:ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ.
ಗಡಿ ಭಾಗದಲ್ಲಿ ತಪಾಸಣೆ ನಡೆಸುತ್ತಿರುವ ಪೊಲೀಸರು ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗಗಳಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.
ಮುಂಬೈ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿರುವ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಮಹಾರಾಷ್ಟ್ರ ಗಡಿಯಲ್ಲಿರುವ ಕೊಗನೊಳ್ಳಿ ಚೆಕ್ ಬಳಿ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ. ಇದರಿಂದ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲು ಗಟ್ಟಿ ನಿಂತಿದ್ದು, ಸರ್ಕಾರದ ನಿಯಮದಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಓದಿ: ಹೆತ್ತ ಮಗಳನ್ನೇ ಕೊಡಲಿಯಿಂದ ಹತ್ಯೆ ಮಾಡಿದ ಪಾಪಿ ತಂದೆ!
ಸುರಕ್ಷತೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕೋವಿಡ್ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರಾಜ್ಯ ಪ್ರವೇಶಿಸಲು ಪೊಲೀಸರು ಅನುಮತಿ ನೀಡುತ್ತಿದ್ದಾರೆ.