ಕರ್ನಾಟಕ

karnataka

ETV Bharat / state

ಸಿಎಂ ತಂಗಿದ್ದ ಖಾಸಗಿ ಹೋಟೆಲ್‌ನ 50ಕ್ಕೂ ಹೆಚ್ಚಿನ ಸಿಬ್ಬಂದಿಗೆ ಕೊರೊನಾ ಟೆಸ್ಟ್

ಇಂದು ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಹಾಗೂ ಖಾಸಗಿ ಹೋಟೆಲ್‌ನಲ್ಲಿರುವ 50ಕ್ಕೂ ಹೆಚ್ಚಿನ ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಿಸಲಾಗುತ್ತಿದೆ..

Corona
Corona

By

Published : Apr 16, 2021, 6:05 PM IST

Updated : Apr 16, 2021, 10:56 PM IST

ಬೆಳಗಾವಿ: ಉಪಚುನಾವಣೆ‌ ಪ್ರಚಾರಕ್ಕೆ ನಗರಕ್ಕೆ ಆಗಮಿಸಿದ್ದ ಸಿಎಂ ಬಿ ಎಸ್ ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಿಎಂ ತಂಗಿದ್ದ ಖಾಸಗಿ ಹೋಟೆಲ್‌ನ ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಿಸಲಾಗುತ್ತಿದೆ.

ನಗರದ ಕೆಎಲ್ಇ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಯಡಿಯೂರಪ್ಪ ಎರಡು ದಿನಗಳ ಕಾಲ ವಾಸ್ತವ್ಯ ಹೂಡಿದ್ದರು. ಬಿಜೆಪಿ ಅಭ್ಯರ್ಥಿ ಪರ ಗೋಕಾಕ್‌, ಅರಬಾವಿ, ಬೆಳಗಾವಿಯಲ್ಲಿ ಪ್ರಚಾರ ನಡೆಸಿದ್ದರು.

ಸಿಎಂ ತಂಗಿದ್ದ ಖಾಸಗಿ ಹೋಟೆಲ್‌ನ 50ಕ್ಕೂ ಹೆಚ್ಚಿನ ಸಿಬ್ಬಂದಿಗೆ ಕೊರೊನಾ ಟೆಸ್ಟ್

ಈ ವೇಳೆ ಸುಸ್ತು ಮತ್ತು ಜ್ವರ ಬಂದು ಸಿಎಂ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಮಾತ್ರೆಗಳನ್ನು ತೆಗೆದುಕೊಂಡ ಸಿಎಂ‌ ಮತ್ತೆ ರೋಡ್ ಶೋ‌ ನಡೆಸಿ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದರು.

ಬಳಿಕ ನಿನ್ನೆ ಸಂಜೆ ಬೆಂಗಳೂರಿಗೆ ಮರಳಿದ್ದರು. ಆದ್ರೆ, ಇಂದು ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಹಾಗೂ ಖಾಸಗಿ ಹೋಟೆಲ್‌ನಲ್ಲಿರುವ 50ಕ್ಕೂ ಹೆಚ್ಚಿನ ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಿಸಲಾಗುತ್ತಿದೆ.

ಈಗಾಗಲೇ ಜಿಲ್ಲಾಸ್ಪತ್ರೆಯ ವೈದ್ಯರು, ಸಿಬ್ಬಂದಿ ನೇತೃತ್ವದ ತಂಡವೂ ಹೋಟೆಲ್‌ನಲ್ಲಿ ಬೀಡುಬಿಟ್ಟಿದೆ.

Last Updated : Apr 16, 2021, 10:56 PM IST

ABOUT THE AUTHOR

...view details