ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲೂ ಇಬ್ಬರು ದಂತ ವೈದ್ಯಕೀಯ ವಿದ್ಯಾರ್ಥಿನಿಯರಿಗೆ ವಕ್ಕರಿಸಿದ ಕೊರೊನಾ - Bihar students tested covid positive in belagavi

ಒಮಿಕ್ರೋನ್​ ಸೋಂಕು ಎಲ್ಲೆಡೆ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಬೆಳಗಾವಿಯ ಖಾಸಗಿ ದಂತ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪರಿಣಾಮ ಜನರು ಭಯಭೀತರಾಗಿದ್ದಾರೆ.

Corona tested positive  for two dental students from Bihar
Corona tested positive for two dental students from Bihar

By

Published : Nov 30, 2021, 4:06 PM IST

ಬೆಳಗಾವಿ: ಇಲ್ಲಿನ ಖಾಸಗಿ ದಂತ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಸೋಂಕಿಗೆ ಒಳಗಾದ ಇಬ್ಬರೂ ವಿದ್ಯಾರ್ಥಿನಿಯರು ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಇವರು ನಗರದ ಖಾಸಗಿ ದಂತ ವೈದ್ಯಕೀಯ ಮಹಾವಿದ್ಯಾಲಯದ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜಿನ ವಸತಿ ನಿಲಯದಲ್ಲಿರುವ ಈ ಇಬ್ಬರು ಸ್ವಯಂ ಪ್ರೇರಿತವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.

ಇದನ್ನೂ ಓದಿ: ತುಮಕೂರಲ್ಲಿ ಕೇರಳ ಮೂಲದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ

ಇಬ್ಬರಲ್ಲೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೆಲ ದಿನಗಳಿಂದ ಜಿಲ್ಲೆಯಲ್ಲಿ ಒಂದೂ ಪ್ರಕರಣ ದಾಖಲಾಗಿರಲಿಲ್ಲ.‌ ಇದೀಗ ಎರಡು ಪ್ರಕರಣಗಳು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿವೆ.

ಇತ್ತೀಚೆಗೆ ಧಾರವಾಡದ ಎಸ್​ಡಿಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ಚಾಮರಾಜನಗರ ಮೆಡಿಕಲ್​ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಸೋಂಕಿತರೆಲ್ಲ ಕ್ವಾರಂಟೈನ್​ನಲ್ಲಿದ್ದು, ಅವರ ಗಂಟಲು ದ್ರವದ ಮಾದರಿಯನ್ನು ಲ್ಯಾಬ್​ಗೆ ಕಳಿಸಲಾಗಿದೆ.

For All Latest Updates

ABOUT THE AUTHOR

...view details