ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೋಳಿ ಚೆಕ್ ಪೋಸ್ಟ್ನಲ್ಲಿ ಕಳೆದ ಮೂರು ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಐಗೆ ಕೊರೊನಾ ಸೋಂಕು ತಗುಲಿದೆ.
ಕೊಗನೋಳಿ ಚೆಕ್ಪೋಸ್ಟ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರ್ಕಲ್ ಇನ್ಸ್ಪೆಕ್ಟರ್ಗೆ ಕೊರೊನಾ - Chikkodi corona news
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕುಗನೋಳಿ ಚೆಕ್ ಪೋಸ್ಟ್ನಲ್ಲಿ ಕಳೆದ ಮೂರು ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದ, ಸರ್ಕಲ್ ಇನ್ಸ್ಪೆಕ್ಟರ್ಗೆ ಕೊರೊನಾ ಸೋಂಕು ತಗುಲಿದೆ.
ಕೊರೊನಾ
ನಿಪ್ಪಾಣಿ ಸಿಪಿಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ಕಳೆದ ಐದು ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದರು. ಇವರಿಗೆ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಆದರೂ ಕೊರೊನಾ ಸೋಂಕು ಇರುವುದು ಧೃಢವಾಗಿದೆ.
ಇವರನ್ನು ಮನೆಯಲ್ಲಿ ಹೋಮ್ ಕ್ವಾರಂಟೈನ್ನಲ್ಲಿ ಇಡಲಾಗಿತ್ತು, ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.