ಬೆಳಗಾವಿ:ನೂರಾರು ಜನರು ಸೇರಿ ಅಂತ್ಯಕ್ರಿಯೆ ಮಾಡಿದ್ದ ಮೃತ ಬಾಲಕಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.
ಮೃತ ಬಾಲಕಿಗೆ ಸೋಂಕು ದೃಢ: ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದವರಿಗೆ ಆತಂಕ - Coronal infection
ಮೃತ ಬಾಲಕಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನೂರಾರು ಜನರು ಸೇರಿ ಅಂತ್ಯಕ್ರಿಯೆ ಮಾಡಿದ್ದಾರೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
![ಮೃತ ಬಾಲಕಿಗೆ ಸೋಂಕು ದೃಢ: ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದವರಿಗೆ ಆತಂಕ Coronal infection confirmed for dead girl](https://etvbharatimages.akamaized.net/etvbharat/prod-images/768-512-8075471-thumbnail-3x2-smk.jpg)
ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಬಾಲಕಿಗೆ ಸೋಂಕು ತಗುಲಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ 12 ವರ್ಷದ ಬಾಲಕಿಯನ್ನು ಜುಲೈ 11 ರಂದು ಮುರಗೋಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೈಲಹೊಂಗಲ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಜುಲೈ 11ರ ರಾತ್ರಿ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ.
ಬಾಲಕಿ ಥ್ರೋಟ್ ಸ್ವ್ಯಾಬ್ ಪಡೆದು ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಲಾಗಿತ್ತು. ಜುಲೈ 12ರ ಬೆಳಗ್ಗೆ ಬಾಲಕಿಯ ಅಂತ್ಯಕ್ರಿಯೆ ನಡೆಸಲಾಗಿದ್ದು, ಕುಟುಂಬಸ್ಥರು ಮತ್ತು ನೂರಾರು ಜನ ಗ್ರಾಮಸ್ಥರು ಪಾಲ್ಗೊಂಡಿದ್ದರು. ಬಾಲಕಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದವರಿಗೆ ಢವಢವ ಶುರುವಾಗಿದೆ. ಬಾಲಕಿ ಚಿಕಿತ್ಸೆ ಪಡೆದಿದ್ದ ಖಾಸಗಿ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗಿದೆ.