ಕರ್ನಾಟಕ

karnataka

ETV Bharat / state

ಬೆಳಗಾವಿಯ ಮೂವರಿಗೆ ಕೊರೊನಾ.. 2 ಕಿ.ಮೀ ವ್ಯಾಪ್ತಿ ಬಫರ್‌ ಜೋನ್ ಎಂದು ಘೋಷಣೆ.. - ಮೂವರಿಗೆ ಕೊರೊನಾ ಸೋಂಕು ಬೆಳಗಾವಿ

ಸೋಂಕಿತರು ಓಡಾಡಿದ ಸ್ಥಳಗಳಲ್ಲಿ ಈಗಾಗಲೇ ಔಷಧಿ ಸಿಂಪಡಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸೋಂಕಿತರು ವಾಸಿಸುತ್ತಿದ್ದ ಪ್ರದೇಶದಲ್ಲಿ ಆಗಮನ-ನಿರ್ಗಮನ ನಿರ್ಬಂಧಿಸಲಾಗಿದೆ.

Coronavirus infection
2 ಕಿಮೀ ವ್ಯಾಪ್ತಿಯನ್ನು ಬಫರ್ ಜೋನ್ ಎಂದು ಘೋಷಣೆ

By

Published : Apr 4, 2020, 11:33 AM IST

ಬೆಳಗಾವಿ :ಜಿಲ್ಲೆಯ ಮೂವರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಸೋಂಕಿತರು ವಾಸಿಸುತ್ತಿದ್ದ 3 ಕಿ.ಮೀ ವ್ಯಾಪ್ತಿ ನಿಷೇಧಿತ ಪ್ರದೇಶ ಹಾಗೂ ನಿಷೇಧಿತ ಪ್ರದೇಶದ ಹೊರಗಿನ 2 ಕಿ.ಮೀ ವ್ಯಾಪ್ತಿಯನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಅನಗತ್ಯ ಕಾಲ್ನಡಿಗೆ, ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.

ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 8 ರಿಂದ 10ರವರೆಗೆ ಸಮಯ ನಿಗದಿ ಮಾಡಲಾಗಿದೆ. ಈ ಪ್ರದೇಶಕ್ಕೆ ಕರ್ತವ್ಯ ನಿರತ ವಾಹನಗಳಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ನಗರದ ಒಂದು ಪ್ರದೇಶ, ಎರಡು ಗ್ರಾಮಗಳಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ. ಸೋಂಕಿತರು ಓಡಾಡಿದ ಸ್ಥಳಗಳಲ್ಲಿ ಈಗಾಗಲೇ ಔಷಧಿ ಸಿಂಪಡಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸೋಂಕಿತರು ವಾಸಿಸುತ್ತಿದ್ದ ಪ್ರದೇಶದಲ್ಲಿ ಆಗಮನ-ನಿರ್ಗಮನ ನಿರ್ಬಂಧಿಸಲಾಗಿದೆ.

ರೋಗ್ಯ ಇಲಾಖೆಯಿಂದ ಬಡಾವಣೆ, ಗ್ರಾಮದ ಜನರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಸೋಂಕಿತರು ವಾಸಿಸುತ್ತಿದ್ದ ಪ್ರದೇಶದಿಂದ ಹೊರಬರುವ ಮುನ್ನ ಸ್ಯಾನಿಟೈಸರ್, ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದೆ. ಸರ್ಕಾರದ ಆದೇಶ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಓರ್ವ ನೋಡಲ್ ಅಧಿಕಾರಿಯನ್ನೂ ನೇಮಿಸಲಾಗಿದೆ.

ABOUT THE AUTHOR

...view details