ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ದಾಖಲಿಸಿದ್ದು, ಬಿಜೆಪಿ ನೂತನ ಸದಸ್ಯರು ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಿದ್ದಾರೆ.
ಶಾಸಕ ಅಭಯ್ ಪಾಟೀಲ್ ಹಾಗೂ ಅನಿಲ್ ಬೆನಕೆ ನೇತೃತ್ವದಲ್ಲಿ ಬಿಜೆಪಿಯ 35 ಸದಸ್ಯರು ತಡರಾತ್ರಿ ಐರಾವತ ಬಸ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶಾಸಕ ಅಭಯ್ ಪಾಟೀಲ್ ಬಿಜೆಪಿ ಉಸ್ತುವಾರಿ ವಹಿಸಿದ್ದರು. ನೂತನ ಸದಸ್ಯರ ಜೊತೆಗೆ ಸಿಎಂ ಭೇಟಿ ಮಾಡಿ ವಿಶೇಷ ಅನುದಾನಕ್ಕೆ ಮನವಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.