ಚಿಕ್ಕೋಡಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಕಿಕ್ಕಿರಿದು ಜನ ಸೇರುವ ಮೂಲಕ ಕೋವಿಡ್ ನಿಯಮವನ್ನು ಗಾಳಿಗೆ ತೂರಿದ್ದು ಕಂಡು ಬಂತು.
ಕಾರ್ಯಕ್ರಮದಲ್ಲಿ ಸಾವಿರಾರು ಜನರು ಅಂತರ ಕಾಯ್ದುಕೊಳ್ಳದೇ ಕುಳಿತಿದ್ದರು, ಇವರಲ್ಲಿ ಬಹುತೇಕರು ಮಾಸ್ಕ್ ಧರಿಸಿರಲಿಲ್ಲ. ವಿಶೇಷ ಎಂದರೆ ಈ ಸಭೆಯಲ್ಲಿ ಸ್ವತಃ ಸಿಎಂ ಬಿಎಸ್ವೈ ಸಚಿವರಾದ ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.