ಚಿಕ್ಕೋಡಿ :ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಮಹರಾಷ್ಟ್ರ ಗಡಿಯಲ್ಲಿರುವ ಕಾಗವಾಡ ಚೆಕ್ ಪೊಸ್ಟ್‌ನಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮಹಾರಾಷ್ಟ್ರದಿಂದ ಕರ್ನಾಟಕ್ಕೆ ಬರುತ್ತಿರುವ ಪ್ರತಿಯೊಬ್ಬರಿಗೂ ಕೊರೊನಾ ನೆಗೆಟಿವ್ ವರದಿ ಕಡ್ಡಾಯ ಎಂದು ಕಾಗವಾಡ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಹೇಳಿದ್ದಾರೆ.
ಕಾಗವಾಡ ತಹಶೀಲ್ದಾರ್ ಕಚೇರಿಯಲ್ಲಿ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಾಗವಾಡ ತಾಲೂಕಿನಲ್ಲಿ ಮೂರು ಚೆಕ್ಪೋಸ್ಟ್ ಹಾಕಲಾಗಿದೆ. ಮಹಾರಾಷ್ಟ್ರದಿಂದ ಕೆಲ ವೈದ್ಯರು ಹೋಗಿ ಬಂದು ಮಾಡುತ್ತಾರೆ. ಅವರಿಗೂ ಕೂಡಾ 72 ಗಂಟೆ ಒಳಗಿನ ಕೊರೊನಾ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ದಿನಂಪ್ರತಿ ಕರ್ನಾಟಕದ ನೂರಾರು ಜನರು ಮಹಾರಾಷ್ಟ್ರದ ಆಸ್ಪತ್ರೆಗಳಿಗೆ ಅವಲಂಬಿತವಾಗಿದ್ದು, ಅವರಿಗೂ ಕೂಡಾ ಮಹಾರಾಷ್ಟ್ರದ ಆಸ್ಪತ್ರೆಗಳಲ್ಲಿ ಕೊರೊನಾ ನೆಗೆಟಿವ್ ವರದಿ ಇದ್ದರೆ ಮಾತ್ರ ಚಿಕಿತ್ಸೆ ನೀಡುತ್ತಿದ್ದಾರೆ ಎಂದರು.