ಬೆಳಗಾವಿ:ಕೋವಿಡ್ ನಿಯಮ ಉಲ್ಲಂಘಿಸಿದ್ದ ಆರೋಪದ ಮೇಲೆ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ನಗರದಲ್ಲಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೊನೆಗೂ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾರಾಂತ್ಯದ ನಿಷೇಧಾಜ್ಞೆ ಮಧ್ಯೆಯೂ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಅನಿಲ್ ಬೆನಕೆ ಭಾಗಿಯಾಗಿದ್ದರು. ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ಈ ಕಾರ್ಯಕ್ರಮ ನಡೆದಿತ್ತು.
ಇದನ್ನೂ ಓದಿ:ಎಮ್ಮೆ ಓಡಿಸುವ ಸ್ಪರ್ಧೆಗೆ ಬಿಜೆಪಿ ಶಾಸಕರಿಂದಲೇ ಚಾಲನೆ.. ಆಡಳಿತ ಪಕ್ಷದಿಂದ ಮತ್ತೆ ಕೋವಿಡ್ ರೂಲ್ಸ್ ಬ್ರೇಕ್
ಮಾಸ್ಕ್ ಧರಿಸದೆ ಒಂದೇ ಕಡೆ 20ಕ್ಕೂ ಹೆಚ್ಚು ಜನರು ಜಮಾವಣೆಗೊಂಡಿದ್ದರು. ಶಾಸಕ ಅನಿಲ್ ಬೆನಕೆ ವಿರುದ್ಧ ತೀವ್ರ ಜನಾಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ಕ್ಯಾಂಪ್ ಠಾಣೆ ಪೊಲೀಸರು ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಬೆಳಗಾವಿ ಬಿಜೆಪಿ ಶಾಸಕನಿಂದ ಮತ್ತೆ ಕೋವಿಡ್ ರೂಲ್ಸ್ ಬ್ರೇಕ್: ಸಂಭಾಜಿ ಪ್ರತಿಮೆಗೆ ಮಾಲಾರ್ಪಣೆ
ಅಲ್ಲದೆ ಸಂಕ್ರಮಣದಂದು ಎಮ್ಮೆ ಓಡಿಸುವ ಸ್ಪರ್ಧೆ ಆಯೋಜಿಸಿದ್ದ ಆಯೋಜಕರ ವಿರುದ್ಧವೂ ಕೇಸ್ ದಾಖಲಾಗಿದೆ. ಎಮ್ಮೆ ಓಡಿಸುವ ಸ್ಪರ್ಧೆಗೂ ಶಾಸಕ ಅನಿಲ್ ಬೆನಕೆ ಚಾಲನೆ ನೀಡಿದ್ದರು. ಸಾವಿರಾರು ಜನರು ಸ್ಪರ್ಧೆ ನೋಡಲು ಆಗಮಿಸಿದ್ದರು.
ಇದನ್ನೂ ಓದಿ:ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಅಗತ್ಯ ಇಲ್ಲ: ಸಿದ್ದರಾಮಯ್ಯ