ಕರ್ನಾಟಕ

karnataka

ETV Bharat / state

ಪತ್ರಕರ್ತರಿಗೆ ಇಂದಿನಿಂದ ಕೋವಿಡ್ ಲಸಿಕೆ: ಡಿಸಿಎಂ ಕಾರಜೋಳ ಚಾಲನೆ

ಕೋವಿಡ್ ಸಂದರ್ಭದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳ ಸುರಕ್ಷತೆ ದೃಷ್ಟಿಯಿಂದ ಲಸಿಕೆ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

ಡಿಸಿಎಂ ಕಾರಜೋಳ ಚಾಲನೆ
ಡಿಸಿಎಂ ಕಾರಜೋಳ ಚಾಲನೆ

By

Published : May 13, 2021, 4:03 PM IST

ಬೆಳಗಾವಿ: ಉಪ ಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳರ ಸಮ್ಮುಖದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಶೀಲ್ಡ್ ಲಸಿಕಾಕರಣಕ್ಕೆ ಚಾಲನೆ ನೀಡಲಾಯಿತು.

ಪತ್ರಕರ್ತರಿಗೆ ಇಂದಿನಿಂದ ಕೋವಿಡ್ ಲಸಿಕೆ: ಡಿಸಿಎಂ ಕಾರಜೋಳ ಚಾಲನೆ
ನಗರದ ಶ್ರೀನಗರ ರಸ್ತೆಯ ವಂಟಮುರಿ ಆರೋಗ್ಯ ಕೇಂದ್ರದಲ್ಲಿ ಲಸಿಕಾಕರಣಕ್ಕೆ ಚಾಲನೆ ನೀಡಿದ ಅವರು, ಕೋವಿಡ್ ಸಂದರ್ಭದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳ ಸುರಕ್ಷತೆ ದೃಷ್ಟಿಯಿಂದ ಲಸಿಕೆ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಮೊದಲ ಡೋಸ್ ಲಸಿಕೆಯನ್ನು ನೀಡಲಾಗಿದೆ. ಇದೇ ರೀತಿ ಮುಂಬರುವ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ವ್ಯಾಕ್ಸಿನ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ವರದಿಗಾರರು, ಛಾಯಾಗ್ರಾಹಕರು, ಉಪ ಸಂಪಾದಕರು ಸೇರಿದಂತೆ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದ 150 ಕ್ಕೂ ಅಧಿಕ ಪ್ರತಿನಿಧಿಗಳು ಕೋವಿಶೀಲ್ಡ್ ಲಸಿಕೆ ಪಡೆದುಕೊಂಡರು.

ಸಂಸದೆ ಮಂಗಳ ಅಂಗಡಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಸಿಪಿ ವಿಕ್ರಮ್ ಆಮಟೆ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಉಪಸ್ಥಿತರಿದ್ದರು.

ABOUT THE AUTHOR

...view details