ಅಥಣಿ: ಕಳೆದ ಒಂದು ವಾರದಿಂದ ತಾಲೂಕಿನಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ ಎಲ್ಲೆಡೆ ಆತಂಕ ಸೃಷ್ಟಿಯಾಗಿದೆ. ತಾಲೂಕಿನಲ್ಲಿ ಈವರೆಗೆ 25 ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಬಲಿಯಾಗಿದ್ದಾರೆ.
ಅಥಣಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು: ಜನರಲ್ಲಿ ಆತಂಕ - ಅಥಣಿ ಕೊರೊನಾ ಸುದ್ದಿ
ಅಥಣಿ ತಾಲೂಕಿನಲ್ಲಿ ಕೊರೊನಾ ಸೋಂಕು ತನ್ನ ವೇಗವನ್ನು ಹೆಚ್ಚಿಸಿಕೊಂಡಿದೆ. ನಿನ್ನೆ ವರದಿಯಲ್ಲಿ ತಾಲೂಕಿನಲ್ಲಿ 7 ಪ್ರಕರಣಗಳು ದಾಖಲಾಗಿವೆ.
![ಅಥಣಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು: ಜನರಲ್ಲಿ ಆತಂಕ Covidi Increasing in Athana](https://etvbharatimages.akamaized.net/etvbharat/prod-images/768-512-7897931-857-7897931-1593913939206.jpg)
ಅಥಣಿಯಲ್ಲಿ ಹೆಚ್ಚುತ್ತಿರುವ ಕೋವಿಡ್: ಜನರಲ್ಲಿ ಆತಂಕ
ಅಥಣಿ ಪಟ್ಟಣದ 5 ಪ್ರದೇಶಗಳನ್ನು ಸೀಲ್ಡೌನ್ ಮಾಡಲಾಗಿದ್ದು, ಶಿವಯೋಗಿ ನಾಡಿನ ಜನರಲ್ಲಿ ಆತಂಕ ಮೂಡಿಸಿದೆ. ತಾಲೂಕಿನಲ್ಲಿ ವ್ಯಾಪಾರಸ್ಥರು ಸ್ವಯಂ ಘೋಷಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಪಟ್ಟಣದ ಮತ್ತೊಂದು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯನ್ನು ಸೀಲ್ಡೌನ್ ಮಾಡಲಾಗಿದೆ. ಅಥಣಿಯ ಝುಂಜರವಾಡ, ಅನಂತಪುರ, ಸಂಕೋನಟ್ಟಿ, ಗುಂಡೆವಾಡಿ, ಚಿಕ್ಕಟ್ಟಿ, ಗ್ರಾಮಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆಯ ವರದಿಯಲ್ಲಿ ತಾಲೂಕಿನಲ್ಲಿ 7 ಪ್ರಕರಣಗಳು ದಾಖಲಾಗಿವೆ.
ಅಥಣಿಯಲ್ಲಿ ಹೆಚ್ಚುತ್ತಿರುವ ಕೋವಿಡ್: ಜನರಲ್ಲಿ ಆತಂಕ