ಬೆಳಗಾವಿ: ಪಶ್ಚಿಮ ಬಂಗಾಳದ ಪಂಜಿಪಾಡಾದಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಚಿಕ್ಕೋಡಿ ತಾಲ್ಲೂಕಿನ ಯಡೂರವಾಡಿ ಗ್ರಾಮದ ಯೋಧ ಸೂರಜ್ ಧೋಂಡಿರಾಮ ಸುತಾರ ಪಾರ್ಥಿವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.
ಅಪಘಾತದಲ್ಲಿ ಸಾವನ್ನಪ್ಪಿದ ಯೋಧನ ಪಾರ್ಥಿವ ಶರೀರವನ್ನು ದೆಹಲಿಯಿಂದ ವಿಮಾನ ಮೂಲಕ ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಜಿಲ್ಲಾಧಿಕಾರಿ ನಿತೀಶ್ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ. ದರ್ಶನ್, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಶ, ಎಸ್ಪಿ ಸಂಜೀವ್ ಪಾಟೀಲ ಸೇರಿದಂತೆ ಬಿಎಸ್ಎಫ್ ಅಧಿಕಾರಿಗಳು, ಯೋಧರು ಅಂತಿಮ ನಮನ ಸಲ್ಲಿಸಿದರು.