ಬೆಳಗಾವಿ: ದಂಪತಿಯನ್ನು ಅವರ ಮನೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಕ್ಕೇರಿ ತಾಲೂಕಿನ ಮಾವನೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾವನೂರು ಗ್ರಾಮದ ಗಜೇಂದ್ರ ಈರಪ್ಪ ಹುನ್ನೂರಿ (60) ಹಾಗೂ ದ್ರಾಕ್ಷಾಯಿಣಿ ಗಜೇಂದ್ರ ಹುನ್ನೂರಿ(45) ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಕೊಲೆ ಯಾವಾಗ ನಡೆದಿದೆ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ.
Belagavi crime: ಬೆಳಗಾವಿಯಲ್ಲಿ ಡಬಲ್ ಮರ್ಡರ್.. ದುಷ್ಕರ್ಮಿಗಳಿಂದ ದಂಪತಿಯ ಬರ್ಬರ ಕೊಲೆ - etv bharat karnataka
ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಕ್ಕೇರಿಯಲ್ಲಿ ನಡೆದಿದೆ.
ಬೆಳಗಾವಿಯಲ್ಲಿ ಡಬಲ್ ಮರ್ಡರ್: ದುಷ್ಕರ್ಮಿಗಳಿಂದ ದಂಪತಿಯ ಬರ್ಬರ ಕೊಲೆ
ದಂಪತಿಗೆ ಓರ್ವ ಮಗಳಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಅಕ್ಕಪಕ್ಕದವರು ಭಾನುವಾರ ಬೆಳಗ್ಗೆ ಮನೆಯಲ್ಲಿ ದಂಪತಿಯ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಯಮಕನಮರಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಜೈನಮುನಿ ಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ..
Last Updated : Jul 9, 2023, 11:01 PM IST