ಕರ್ನಾಟಕ

karnataka

By

Published : Mar 17, 2021, 4:56 PM IST

ETV Bharat / state

ಅರಣ್ಯ ಇಲಾಖೆ ಸಿಬ್ಬಂದಿಯಿಂದ ಮೊಸಳೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹುಕ್ಕೇರಿ ತಾಲೂಕಿನ ಕೋಚರಿ ಗ್ರಾಮದ ರೈತ ರಾವಸಾಹೇಬ ಮಗದುಮ್ಮ ಎಂಬುವವರ ಹೊಲದಲ್ಲಿನ ಬಾವಿಗೆ ಆಹಾರಕ್ಕಾಗಿ ಬಂದು ಸೇರಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ.

crocodile-protected-by-the-forest-department-in-chikkodi
ಕೋಚರಿ ಗ್ರಾಮದ ಬಾವಿಯಲ್ಲಿ ಮೊಸಳೆ ಸೆರೆ

ಚಿಕ್ಕೋಡಿ:ಬಾವಿಯಲ್ಲಿ ಸಿಲುಕಿದ್ದ ಬೃಹದಾಕಾರದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಚರಿ ಗ್ರಾಮದಲ್ಲಿ ನಡೆದಿದೆ.

ಮೊಸಳೆಯನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ಕೋಚರಿ ಗ್ರಾಮದ ರೈತ ರಾವಸಾಹೇಬ ಮಗದುಮ್ಮ ಎಂಬುವವರ ಹೊಲದಲ್ಲಿನ ಬಾವಿಗೆ ಕಳೆದ ಒಂದು ವಾರದ ಹಿಂದೆ ಆಹಾರ ಅರಸಿ ಹಿರಣ್ಯಕೇಶಿ ನದಿಯಿಂದ ಮೊಸಳೆಯೊಂದು ಬಂದು ಸೇರಿಕೊಂಡಿತ್ತು. ಈ ವಿಷಯವನ್ನು ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದಾಗ ಸ್ಥಳಕ್ಕೆ ಬಂದು ಮೊಸಳೆ ಸೆರೆ ಹಿಡಿಯಲು ಪ್ರಯತ್ನಿಸಿದ್ದರು. ಆದರೆ, ಸಿಬ್ಬಂದಿಗೆ ಮೊಸಳೆ ಮಾತ್ರ ಸಿಕ್ಕಿರಲಿಲ್ಲ. ಹೀಗಾಗಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು.

ಇದನ್ನೂ ಓದಿ:ಯಾವುದೇ ಲಾಕ್‌ಡೌನ್, ಕರ್ಫ್ಯೂ ಇಲ್ಲ, ಜನ ಆತಂಕ ಪಡುವ ಅಗತ್ಯ ಇಲ್ಲ : ಸಿಎಂ

ನಾಲ್ಕೈದು ದಿನಗಳವರೆಗೆ ನಿರಂತರ ಕಾರ್ಯಾಚರಣೆ ಮಾಡಿದ ಸಿಬ್ಬಂದಿ ಮೊಸಳೆಯನ್ನು ಸೆರೆ ಹಿಡಿದು ಸುರಕ್ಷಿತವಾಗಿ ನದಿಗೆ ಬಿಟ್ಟಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ABOUT THE AUTHOR

...view details