ಚಿಕ್ಕೋಡಿ :ಪ್ರವಾಹದಿಂದ ತತ್ತರಿಸಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದ ಹಿರಣ್ಯಕೇಶಿ ನದಿ ತೀರದ ಜನರಿಗೆ ಇದೀಗ ಮೊಸಳೆ ಕಾಟ ಶುರುವಾಗಿದೆ.
ಕಳೆದ ಹಲವು ದಿನಗಳಿಂದ ನದಿ ದಡದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕುರಣಿ ಗ್ರಾಮದ ಜನರಿಗೆ ಮೊಸಳೆ ಕಾಣಿಸಿಕೊಂಡಿದ್ದು, ಕೋಚರಿ ಬ್ಯಾರೇಜ್‍ನಿಂದ ಹೊಳೆಮ್ಮ ದೇವಿ ದೇವಸ್ಥಾನದವರೆಗಿನ ಬ್ಯಾರೇಜ್ವರೆಗೆ ಮೊಸಳೆಗಳು ಇವೆ ಎನ್ನಲಾಗುತ್ತಿದೆ.