ಚಿಕ್ಕೋಡಿ:ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಪ್ರಮಾಣ ತಗ್ಗಿದೆ. ಕೃಷ್ಣಾ, ವೇದಗಂಗಾ ಹಾಗೂ ದೂಧಗಂಗಾ ನದಿ ನೀರಿನ ಒಳ ಹರಿವಿನಲ್ಲಿ ಯಥಾಸ್ಥಿತಿ ಇದೆ.
ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ತಗ್ಗಿದ ಮಳೆ: ಬೆಳಗಾವಿ ಜಿಲ್ಲೆಯ ಜನ ತುಸು ನಿರಾಳ - Vedaganga River
ಮಹಾರಾಷ್ಟ್ರದಲ್ಲಿ ಮಳೆರಾಯ ಸ್ವಲ್ಪ ಬಿಡುವು ಕೊಟ್ಟಿದ್ದಾನೆ. ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಸ್ವಲ್ಪ ಕಡಿಮೆಯಾಗಿದೆ.
ಮಹರಾಷ್ಟ್ರದ ಘಟ್ಟ ಪ್ರದೇಶದಲ್ಲಿ ತಗ್ಗಿದ ಮಳೆ
ನದಿ ನೀರು ಎರಡು ಅಡಿಗಳಷ್ಟು ಇಳಿಕೆಯಾಗಿದ್ದು, ನದಿ ಪಾತ್ರದಲ್ಲಿ ಪ್ರವಾಹದ ಆತಂಕ ಸದ್ಯಕ್ಕೆ ಇಲ್ಲ. ಹೀಗಾಗಿ ನದಿ ತೀರದಲ್ಲಿ ವಾಸಿಸುವ ಜನರು ಸ್ವಲ್ಪ ನಿರಾಳರಾಗಿದ್ದಾರೆ.
ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕಿನ 7 ಸೇತುವೆಗಳು ನೀರಿನಲ್ಲಿ ಮುಳುಗಿವೆ. ರಾಯಬಾಗ ತಾಲೂಕಿನ ಒಂದು ಸೇತುವೆ ಜಲಾವೃತವಾಗಿದೆ.