ಬೆಳಗಾವಿ:ಗೀಜರ್ಗೆ ಅಳವಡಿಸಿದ್ದ ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬಸವನಗರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸುರೇಶ್ ರಾಥೋಡ ಎಂಬುವರಿಗೆ ಸೇರಿದ ಮನೆ ಹೊತ್ತಿ ಉರಿದಿದೆ. ಮನೆಯಲ್ಲಿದ್ದ ಜನರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪೀಠೋಪಕರಣ, ಟಿವಿ ಸೇರಿ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸ್ಥಳೀಯರು ಅಗ್ನಿ ಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.