ಕರ್ನಾಟಕ

karnataka

ETV Bharat / state

ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟ: ಓರ್ವನಿಗೆ ಗಂಭೀರ ಗಾಯ - belgavi Cylinder explosion news

ರಾತ್ರಿ ವೇಳೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ರಭಸಕ್ಕೆ ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಮನೆಯಲ್ಲಿ ದಶರಥ ಶಿಂಧೆ ಎಂಬುವರು ಒಬ್ಬರೇ ಇದ್ದುದರಿಂದ ಭಾರಿ ಅನಾಹುತ ತಪ್ಪಿದೆ.

Cylinder explosion at chikkodi
ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟ; ಓರ್ವರಿಗೆ ಗಂಭೀರ ಗಾಯ!

By

Published : Feb 23, 2021, 12:11 PM IST

ಚಿಕ್ಕೋಡಿ: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಓರ್ವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನ ಸವದತ್ತಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

ಸಿಲಿಂಡರ್ ಸ್ಫೋಟಗೊಂಡ ಮನೆ

ಬಾವನ ಸವದತ್ತಿ ಗ್ರಾಮದ ನಿವಾಸಿ ದಶರಥ ಶಿಂದೆ (68) ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ವೇಳೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ರಭಸಕ್ಕೆ ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಮನೆಯ ಕಿಟಕಿ ಗಾಜುಗಳು, ಗೋಡೆಗಳು ಹಾಗೂ ಗೃಹ ಬಳಕೆ ವಸ್ತುಗಳು ಹಾನಿಗೀಡಾಗಿವೆ.

ಈ ಸುದ್ದಿಯನ್ನೂ ಓದಿ:ಡ್ರಗ್ಸ್ ಮಾಫಿಯಾ: ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ

ಮನೆಯ ಹೆಚ್ಚಿನ ಸದಸ್ಯರು ಬೇರೆ ಊರಿಗೆ ತೆರಳಿದ್ದ ವೇಳೆ ಘಟನೆ ನಡೆದಿದ್ದು, ಮನೆಯಲ್ಲಿ ದಶರಥ ಶಿಂದೆ ಒಬ್ಬರೇ ಇದ್ದುದರಿಂದ ಭಾರಿ ಅನಾಹುತ ತಪ್ಪಿದೆ. ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details