ಬೆಳಗಾವಿ: ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಲಗೌಡ ಪಾಟೀಲ್ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.
ಗ್ಯಾಸ್ ಸೋರಿಕೆಯಾದ ಪರಿಣಾಮ ಸಿಲಿಂಡರ್ ಸ್ಫೋಟವಾಗಿದೆ ಎಂಬ ಮಾಹಿತಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸಿಲಿಂಡರ್ ಬ್ಲಾಸ್ಟ್ ಆಗುತ್ತಿದಂತೆ ಮನೆಗೆ ಬೆಂಕಿ ತಗುಲಿದೆ. ಪರಿಣಾಮ ಅಪಾರ ಪ್ರಮಾಣದ ದವಸ ಧಾನ್ಯ, ವಸ್ತುಗಳು,ಬಟ್ಟೆ ಬೆಂಕಿಗೆ ಆಹುತಿಯಾಗಿವೆ.